ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುಲ್‌ಬುಲ್‌ ಚಂಡಮಾರುತ: ಬಾಂಗ್ಲಾದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ

Last Updated 11 ನವೆಂಬರ್ 2019, 19:42 IST
ಅಕ್ಷರ ಗಾತ್ರ

ಢಾಕಾ: ಬಾಂಗ್ಲಾದೇಶದಲ್ಲಿ ಬುಲ್‌ಬುಲ್‌ ಚಂಡಮಾರುತದ ಅಬ್ಬರ ಮುಂದುವರಿದಿದೆ. ಮೃತರ ಸಂಖ್ಯೆ 13 ಕ್ಕೆ ಏರಿಕೆಯಾಗಿದ್ದು, 20 ಜನ ಗಾಯಗೊಂಡಿದ್ದಾರೆ.

ಮನೆಗಳು ಕುಸಿದುಬಿದ್ದಿದ್ದು, ಮರಗಳು ಬುಡಮೇಲಾಗಿವೆ. ಇದರಿಂದ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ.

ಬಾಂಗ್ಲಾದೇಶದಲ್ಲಿ ಭಾನುವಾರ ಸಂಜೆ ಹೊತ್ತಿಗೆ ಚಂಡಮಾರುತ ಅಪ್ಪಳಿಸಿದ್ದು, ಗಂಟೆಗೆ120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಸಂಜೆಯ ನಂತರ ಚಂಡಮಾರುತ ವಾಯುಭಾರ ಕುಸಿತವಾಗಿ ಮಾರ್ಪಾಡಾಗಿತ್ತು. ಗಾಳಿ–ಮಳೆಯಿಂದಾಗಿ 5 ಸಾವಿರ ಮಳೆಗಳಿಗೆ ಹಾನಿಯಾಗಿದೆ. ದಕ್ಷಿಣ ಬಾಂಗ್ಲಾದಲ್ಲೇ ಚಂಡಮಾರುತದಿಂದ ಭಾರಿ ಹಾನಿಯಾಗಿದೆ.

ಆಳ ಸಮುದ್ರ ಮೀನುಗಾರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಮುಂದಿನ 24 ಗಂಟೆಗಳವರೆಗೆ ಕರಾವಳಿ ಭಾಗದ
ವಿಮಾನ ಹಾರಾಟ ನಿಲ್ಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT