ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಆಫ್ರಿಕಾ: ನಿರ್ಮಾಣ ಹಂತದ ಕಟ್ಟಡ ಕುಸಿತ– ಮೃತರ ಸಂಖ್ಯೆ 32ಕ್ಕೆ ಏರಿಕೆ

ದಕ್ಷಿಣ ಆಫ್ರಿಕಾದ ಕೋಸ್ಟಲ್ ಸಿಟಿಯ ಜಾರ್ಜ್ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಹುಮಡಿಯ ಕಟ್ಟಡ ಕುಸಿತ
Published 14 ಮೇ 2024, 4:44 IST
Last Updated 14 ಮೇ 2024, 4:44 IST
ಅಕ್ಷರ ಗಾತ್ರ

ಕೇಪ್ ಟೌನ್‌ (ದಕ್ಷಿಣ ಆಫ್ರಿಕಾ): ದಕ್ಷಿಣ ಆಫ್ರಿಕಾದ ಕೋಸ್ಟಲ್ ಸಿಟಿಯ ಜಾರ್ಜ್ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಹುಮಡಿಯ ಕಟ್ಟಡ ಕುಸಿತ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಇನ್ನೂ 14 ಜನರು ಅವಶೇಷಗಳಡಿ ಸಿಲುಕಿದ್ದಾರೆ.

ಘಟನೆಯು ಮೇ 6ರಂದು ಮಧ್ಯಾಹ್ನ ಸಂಭವಿಸಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ವಿಪತ್ತು ನಿರ್ವಹಣಾ ತಂಡವು, ಇದುವರೆಗೆ ಶೋಧ ಕಾರ್ಯ ನಡೆಸುತ್ತಿದೆ.

ಭಾನುವಾರ ಅಚ್ಚರಿಯಂಬಂತೆ ಅವಶೇಷಗಳಡಿ ಇನ್ನೂ ಬದುಕುಳಿದಿದ್ದ ಮೂವರನ್ನು ವಿಪತ್ತು ನಿರ್ವಹಣಾ ತಂಡವು ರಕ್ಷಿಸಿದೆ.

ಈ ಘಟನೆಯಲ್ಲಿ 21 ಕಾರ್ಮಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಪೈಕಿ 11 ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT