ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಆರೋಗ್ಯ ಕಾರ್ಯಕರ್ತರ ನೆರವಿಗೆ ಅಮೆರಿಕ ಭಾರತೀಯರಿಂದ ‘ಪ್ರಾಜೆಕ್ಟ್‌ ಮದದ್’

Last Updated 23 ಮೇ 2021, 11:02 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ಭಾರತದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತದ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಆರೈಕೆ ಕಾರ್ಯಕರ್ತರಿಗೆ ನೆರವಾಗುವ ನಿಟ್ಟಿನಲ್ಲಿ ಅಮೆರಿಕದಲ್ಲಿರುವ ಭಾರತೀಯ ವೈದ್ಯರು ವಿಭಿನ್ನ ಕಾರ್ಯಕ್ರಮವೊಂದಕ್ಕೆ ಚಾಲನೆ ನೀಡಿದ್ದಾರೆ.

ಭಾರತದ ಗ್ರಾಮೀಣ ಪ್ರದೇಶದ ಸ್ಥಳೀಯ ಆರೋಗ್ಯ ಕಾರ್ಯಕರ್ತರು ಮತ್ತು ನೋಂದಾಯಿತ ವೈದ್ಯಕೀಯ ವೃತ್ತಿಯಲ್ಲಿರುವವರಿಗೆ (ಆರ್‌ಎಂಪಿ) ಕೋವಿಡ್‌ ನಿಯಂತ್ರಣಕ್ಕಾಗಿ ಸರಿಯಾದ ಶಿಕ್ಷಣ ಹಾಗೂ ತರಬೇತಿಯನ್ನು ಒದಗಿಸುವ ನಿಟ್ಟಿನಲ್ಲಿ ‘ಪ್ರಾಜೆಕ್ಟ್‌ ಮದದ್‌’ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

ಈ ಕಾರ್ಯಕ್ರಮದಡಿ ವೈದ್ಯರು ವರ್ಚುವಲ್‌ ವೇದಿಕೆ ಮೂಲಕ ಗ್ರಾಮೀಣ ಪ್ರದೇಶದ ಆರೋಗ್ಯ ಕಾರ್ಯಕರ್ತರು ಮತ್ತು ಆರ್‌ಎಂಪಿಗಳಿಗೆ ಕೋವಿಡ್‌ ಚಿಕಿತ್ಸೆಗೆ ಸಂಬಂಧಿಸಿದ ಮಾಹಿತಿ ಮತ್ತು ತರಬೇತಿಯನ್ನು ನೀಡಲಿದ್ದಾರೆ.

ಪ‍್ರಸ್ತುತ ‘ಮದದ್‌’ ತಂಡವು ತೆಲಂಗಾಣ ಮತ್ತು ಆಂಧ್ರಪ್ರದೇಶದ ಗ್ರಾಮೀಣ ಪ್ರದೇಶಗಳ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರೊಂದಿಗೆ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಇದನ್ನು ಬೇರೆ ಪ್ರದೇಶಗಳಿಗೂ ವಿಸ್ತರಿಸಲಾಗುವುದು.

ಕೋವಿಡ್‌–19 ಲಕ್ಷಣಗಳು, ಕಡಿಮೆ ಲಕ್ಷಣವುಳ್ಳ ಸೋಂಕಿತರಿಗೆ ಮನೆಯಲ್ಲಿ ಚಿಕಿತ್ಸೆ, ಲಸಿಕೆಗೆ ಸಂಬಂಧಿಸಿದ ಸಲಹೆಗಳು ಹಾಗೂ ಹೆಚ್ಚು ಔಷಧಿ ನೀಡುವುದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ‘ಮದದ್‌’ ವೈದ್ಯರ ತಂಡವು ಆರೋಗ್ಯ ಕಾರ್ಯಕರ್ತರೊಂದಿಗೆ ಮಾಹಿತಿ ಹಂಚಿಕೊಳ್ಳಲಿದೆ.

‘ವಾರದಲ್ಲಿ ಎರಡು ದಿನ ‘ಝೂಮ್‌’ ಫ್ಲಾಟ್‌ಫಾರ್ಮ್‌ ಮೂಲಕ ಮದದ್‌ ತಂಡವು ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದವನ್ನು ನಡೆಸಲಿದೆ. ಇದಕ್ಕಾಗಿ ಸಮಯವನ್ನು ನಿಗದಿ ಮಾಡಲಾಗುವುದು. ಈಗಾಗಲೇ ಆರ್‌ಎಂಪಿಗಳೊಂದಿಗೆ 150 ಸಂವಾದ ಕಾರ್ಯಕ್ರಮವನ್ನು ನಡೆಸಲಾಗಿದೆ’ ಎಂದು ಡಯಾಗ್ನಸ್ಟಿಕ್‌ ರೇಡಿಯಾಲಜಿ ತಜ್ಞ ಡಾ.ಸುಬ್ಬರಾವ್‌ ಇನಾಂಪುಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT