ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತವು ಅಂತರರಾಷ್ಟ್ರೀಯ ಅಭಿವೃದ್ಧಿಗಾಗಿನ ಅಮೆರಿಕದ ಏಜೆನ್ಸಿಯ (ಯುಎಸ್ಏಡ್) 2 ಸಾವಿರ ಉದ್ಯೋಗಿಗಳನ್ನು ವಜಾ ಮಾಡಿದ್ದು, ಇತರೆ ಸಾವಿರಾರು ನೌಕರರನ್ನು ರಜೆ ಮೇಲೆ ಕಳುಹಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಉದ್ಯಮಿ ಎಲಾನ್ ಮಸ್ಕ್ ನೇತೃತ್ವದ ಅಮೆರಿಕದ ಸರ್ಕಾರಿ ದಕ್ಷತೆಯ ಇಲಾಖೆಯು ವೆಚ್ಚಗಳಲ್ಲಿ ಕಡಿತ ಮಾಡುವುದಾಗಿ ಈಚೆಗೆ ಘೋಷಿಸಿತ್ತು. ಇದರ ಬೆನ್ನಲ್ಲೇ ಯುಎಸ್ಏಡ್ನ ಉದ್ಯೋಗಿಗಳನ್ನು ಕಡಿತಗೊಳಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಯುಎಸ್ಏಡ್ ಉದ್ಯೋಗಿಗಳನ್ನು ಕಡಿತಗೊಳಿಸುವ ಟ್ರಂಪ್ ಆಡಳಿತದ ಪ್ರಸ್ತಾವಕ್ಕೆ ಫೆಡರಲ್ ನ್ಯಾಯಾಧೀಶರು ಸಮ್ಮತಿ ಸೂಚಿಸಿದ್ದಾರೆ. ಇದರಿಂದಾಗಿ ಸರ್ಕಾರಿ ನೌಕರರ ಸಂಘಗಳಿಗೆ ಹಿನ್ನಡೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ.

4,600 ಯುಎಸ್ಏಡ್ ಉದ್ಯೋಗಿಗಳ ಕಡಿತ ಸೇರಿದಂತೆ ಅಮೆರಿಕದ ನಾಗರಿಕ ಸೇವೆ ಮತ್ತು ವಿದೇಶಾಂಗ ಸಚಿವಾಲಯದ ಸಿಬ್ಬಂದಿಯನ್ನು ರಜೆ ಮೇಲೆ ಕಳುಹಿಸಲು ಸಾಧ್ಯತೆ ಇದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
.ಯುಎಸ್ಏಡ್ | ಭಾರತದ ಚುನಾವಣೆಗೆ ₹155 ಕೋಟಿ: ಬೈಡನ್ ವಿರುದ್ಧ ಟ್ರಂಪ್ ಟೀಕೆ .‘ಮತದಾನ ಉತ್ತೇಜನ’ಕ್ಕೆ ಅಮೆರಿಕದ ನೆರವು ಸ್ಥಗಿತ.₹180 ಕೋಟಿ ಪಡೆದ ಮೋದಿ ಎಂಬ ಟ್ರಂಪ್ ಹೇಳಿಕೆ ಬಗ್ಗೆ ಬಿಜೆಪಿ ಮೌನವೇಕೆ: ಕಾಂಗ್ರೆಸ್.ಮತ ಪ್ರಮಾಣ ಹೆಚ್ಚಳ | ಮೋದಿಗೆ ₹182 ಕೋಟಿ: ಟ್ರಂಪ್ ಹೇಳಿಕೆ ಸೃಷ್ಟಿಸಿದ ಸಂಚಲನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.