ಇರಾನ್‌ಗೆ ಪ್ರವಾಸ ಮಾಡಬೇಡಿ: ಭಾರತ ಸಲಹೆ
ನವದೆಹಲಿ: ಇರಾನ್‌ನಲ್ಲಿ ಶಾಂತಿ–ಸುವ್ಯವಸ್ಥೆ ಹದಗೆಟ್ಟಿದ್ದು ಅಲ್ಲಿಗೆ ಭಾರತೀಯರು ಪ್ರವಾಸ ಮಾಡಬಾರದು ಎಂದು ವಿದೇಶಾಂಗ ಸಚಿವಾಲಯ ಬುಧವಾರ ಎಚ್ಚರಿಕೆ ನೀಡಿದೆ. ‘ಇರಾನ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಸೂಚನೆ ಬರುವವರೆಗೂ ಭಾರತೀಯ ಪ್ರಜೆಗಳು ಇಸ್ಲಾಮಿಕ್ ಗಣರಾಜ್ಯ ಇರಾನ್‌ಗೆ ಪ್ರಯಾಣಿಸುವುದನ್ನು ತಪ್ಪಿಸಬೇಕು. ಅಲ್ಲಿ ವಾಸಿಸುತ್ತಿರುವ ಭಾರತೀಯರು ಮತ್ತು ಪಿಐಒಗಳು (ಭಾರತೀಯ ಮೂಲದ ವ್ಯಕ್ತಿಗಳು) ಎಚ್ಚರಿಕೆ ವಹಿಸಬೇಕು. ಪ್ರತಿಭಟನಾ ಪ್ರದೇಶಗಳಿಗೆ ಭೇಟಿ ನೀಡಬಾರದು’ ಎಂದು ಸಲಹೆ ನೀಡಿದೆ.