ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನಹಾನಿ ಪ್ರಕರಣ: ವಿಚಾರಣೆಗೆ ಹಾಜರಾದ ಡೊನಾಲ್ಡ್ ಟ್ರಂಪ್

Published 17 ಜನವರಿ 2024, 3:18 IST
Last Updated 17 ಜನವರಿ 2024, 3:18 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಮುನ್ನ ನಡೆದ ‘ಐವಾ ರಿಪಬ್ಲಿಕನ್ ಕಾಕಸಸ್’ನಲ್ಲಿ ಗೆಲುವು ಸಾಧಿಸಿದ ಬೆನ್ನಲ್ಲೇ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು, ಮಾನಹಾನಿ ಪ್ರಕರಣದ ವಿಚಾರಣೆಗೆ ನ್ಯೂಯಾರ್ಕ್‌ನ ಮ್ಯಾನ್‌ಹಾಟ್ಟನ್ ನ್ಯಾಯಾಲಯಕ್ಕೆ ಹಾಜರಾದರು.

ಕಳೆದ ವರ್ಷ ಟ್ರಂಪ್ ವಿರುದ್ಧ ಅತ್ಯಾಚಾರದ ಆರೋಪ ಮಾಡಿ, ಗೆಲುವು ಸಾಧಿಸಿದ್ದ ಲೇಖಕಿ ಇ. ಜೀನ್ ಕ್ಯಾರೊಲ್ ಅವರೇ ಟ್ರಂಪ್‌ ವಿರುದ್ಧ ಮಾನಹಾನಿ ಪ್ರಕರಣ ಹೂಡಿದ್ದಾರೆ.

2019ರಲ್ಲಿ ಟ್ರಂಪ್ ಅಧ್ಯಕ್ಷರಾಗಿದ್ದಾ‌ಗ ತಮ್ಮ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡಿದ್ದಾರೆ ಎನ್ನುವುದು ಆರೋಪ. ಕನಿಷ್ಠ $12 ಮಿಲಿಯನ್‌ ಪರಿಹಾರ ನೀಡಬೇಕು ಎಂದು ಕ್ಯಾರೊಲ್ ಬೇಡಿಕೆ ಇಟ್ಟಿದ್ದಾರೆ.

ನ್ಯಾಯಮೂರ್ತಿ ಲೆವಿಸ್ ಕಲ್ಪನ್ ಅವರು ಪ್ರಕರಣದ ವಿಚಾರಣೆಯ ನೇತೃತ್ವ ವಹಿಸಿದ್ದು, ಟ್ರಂಪ್ ಅವರು ಕ್ಯಾರೊಲ್ ಅವರ ಮಾನಹಾನಿ ಮಾಡಿದ್ದು ಸಾಬೀತಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ಮಾನಹಾನಿಯಾಗಿ ಎಷ್ಟು ಮೊತ್ತ ನೀಡಬೇಕು ಎನ್ನುವ ನಿರ್ಧಾರವನ್ನು ನ್ಯಾಯಾಧೀಶರ ಸಮಿತಿಗೆ ಬಿಟ್ಟಿದ್ದಾರೆ ಎಂದು ಬ್ಲೂಂಬರ್ಗ್ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT