ವಾಷಿಂಗ್ಟನ್: ಜುಲೈ 7ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಶ್ವೇತಭವನದಲ್ಲಿ ಭೇಟಿಯಾಗಲಿದ್ದಾರೆ ಎಂದು ಅಮೆರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಜಾ ಮತ್ತು ಇಸ್ರೇಲ್ ನಡುವಿನ 20 ತಿಂಗಳ ಯುದ್ಧದ ಭೀಕರ ದೃಶ್ಯಗಳು ಹೃದಯವಿದ್ರಾವಕವಾಗಿವೆ. ಉಭಯ ದೇಶಗಳ ನಡುವೆ ಕದನ ವಿರಾಮ ಘೋಷಣೆ ಸೇರಿದಂತೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ನೆತನ್ಯಾಹು ಅವರನ್ನು ಒತ್ತಾಯಿಸುತ್ತೇನೆ ಎಂದು ಟ್ರಂಪ್ ತಿಳಿಸಿರುವುದಾಗಿ ವರದಿಯಾಗಿದೆ.

‘ಗಾಜಾದಲ್ಲಿ ಕದನ ವಿರಾಮ ಒಪ್ಪಂದ ಏರ್ಪಡಲಿ. ಒತ್ತೆಯಾಳುಗಳು ವಾಪಸಾಗಲಿ’ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಕೆಲವು ಪ್ಯಾಲೆಸ್ಟೀನಿಯನ್ನರು ಶಾಂತಿ ಮಾತುಕತೆ ಸಾಧ್ಯತೆಯ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಉತ್ತರ ಗಾಜಾದ ಕೆಲವು ಪ್ರದೇಶಗಳಲ್ಲಿ ಸಾಮೂಹಿಕ ಸ್ಥಳಾಂತರಕ್ಕೆ ಇಸ್ರೇಲ್ ಆದೇಶಿಸಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಉನ್ನತ ಸಲಹೆಗಾರ ರಾನ್ ಡರ್ಮರ್ ಅವರು ಕದನ ವಿರಾಮ ಮಾತುಕತೆಗಾಗಿ ಈ ವಾರ ವಾಷಿಂಗ್ಟನ್ಗೆ ಭೇಟಿ ನೀಡಲಿದ್ದು, ಇರಾನ್, ಗಾಜಾ, ಸಿರಿಯಾ ಮತ್ತು ಇತರ ಪ್ರಾದೇಶಿಕ ಸವಾಲುಗಳ ಬಗ್ಗೆ ಚರ್ಚಿಸುವ ನಿರೀಕ್ಷೆಯಿದೆ ಎಂದು ಟ್ರಂಪ್ ಅವರ ವಕ್ತಾರೆ ಕ್ಯಾರೋಲಿನ್ ಲೀವಿಟ್ ತಿಳಿಸಿದ್ದಾರೆ.

ಸೋಮವಾರ ಗಾಜಾದ ಹಲವೆಡೆ ಇಸ್ರೇಲ್ ಪಡೆಗಳು ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 74 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2023ರ ಅಕ್ಟೋಬರ್ 7ರಿಂದ ನಡೆಯುತ್ತಿರುವ ಹಮಾಸ್ ಮತ್ತು ಇಸ್ರೇಲ್ ನಡುವಿನ ಯುದ್ಧದಲ್ಲಿ ಈವರೆಗೆ 56 ಸಾವಿರಕ್ಕೂ ಅಧಿಕ ಪ್ಯಾಲೆಸ್ಟೀನಿಯರು ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.