ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿದೇಶಾಂಗ ನೀತಿಯನ್ನು ಪ್ರಶಂಸಿಸಿರುವ ಶ್ವೇತಭವನ, ಟ್ರಂಪ್ ಮಧ್ಯಸ್ಥಿಕೆಯಿಂದ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧ ಕೊನೆಗೊಂಡಿದೆ ಎಂದು ತಿಳಿಸಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ವೇತಭವನ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್, ತಮ್ಮ ಕೆಲಸಗಳ ಮೂಲಕ ಟ್ರಂಪ್ ಅವರು ವಿಶ್ವದ ಗಮನ ಸೆಳೆದಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ಕೊನೆಗೊಳಿಸಿದ್ದಾರೆ. ರಷ್ಯಾ ಮತ್ತು ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ’ ಎಂದಿದ್ದಾರೆ.

‘ಸೇನಾ ಕಾರ್ಯಾಚರಣೆಗಳ ಮೂಲಕ ಇರಾನ್ನ ಪರಮಾಣು ತಾಣಗಳನ್ನು ಸಂಪೂರ್ಣವಾಗಿ ನಾಶ ಮಾಡಿದ್ದಾರೆ. ಎಲ್ಲಾ ಒತ್ತೆಯಾಗಳುಗಳನ್ನು ಬಿಡುಗಡೆ ಮಾಡುವ ಮೂಲಕ ಇಸ್ರೇಲ್ ಮತ್ತು ಗಾಜಾ ನಡುವೆ ಸಂಘರ್ಷವನ್ನು ಕೊನೆಗೊಳಿಸಿ, ಕದನ ವಿರಾಮ ಘೋಷಿಸುವ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.

‘ಟ್ರಂಪ್ ಅವರ ಮಧ್ಯಸ್ಥಿಕೆಯಿಂದ ಈಗಾಗಲೇ ಹಲವಾರು ಒತ್ತೆಯಾಳುಗಳು ಬಿಡುಗಡೆಯಾಗಿದ್ದಾರೆ ’ ಎಂದೂ ತಿಳಿಸಿದ್ದಾರೆ.

‘ಭಾರತ ಮತ್ತು ಪಾಕಿಸ್ತಾನದ ನಡುವೆ ಶಾಂತಿ ಸ್ಥಾಪನೆಗೆ ಅಮೆರಿಕ ಮಧ್ಯಸ್ಥಿಕೆ ವಹಿಸಿ ಕದನ ವಿರಾಮವನ್ನು ಸಾಧ್ಯವಾಗಿಸಿದೆ’ ಎಂದು ಟ್ರಂಪ್ ಹಲವು ಸಂದರ್ಭಗಳಲ್ಲಿ ಹೇಳಿದ್ದಾರೆ. ಆದರೆ, ಈ ಹೇಳಿಕೆಯನ್ನು ಭಾರತ ನಿರಾಕರಿಸಿದೆ.

ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತ ‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಸೇನಾ ಕಾರ್ಯಾಚರಣೆ ಕೈಗೊಂಡಿತ್ತು. ಭಾರತ ದಾಳಿಗೆ ಪಾಕಿಸ್ತಾನವೂ ಪ್ರತಿದಾಳಿ ನಡೆಸಿತ್ತು.

ಇದಾದ ಬೆನ್ನಲ್ಲೇ ಉಭಯ ದೇಶಗಳ ನಡುವೆ ಕದನ ವಿರಾಮ ಒಪ್ಪಂದ ಏರ್ಪಟ್ಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.