ವಾಷಿಂಗ್ಟನ್: ‘ಹೊರ್ಮುಜ್ ಜಲಸಂಧಿಯಲ್ಲಿ ಸಿಲುಕಿಕೊಂಡಿರುವ ವಿದೇಶಿ ಹಡಗುಗಳನ್ನು ಸೋಮವಾರದಿಂದ ಸುರಕ್ಷಿತವಾಗಿ ಹೊರತರಲು ನಮ್ಮ ನೌಕಾಪಡೆ ಸಹಾಯ ಮಾಡಲಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಈ ಪ್ರಕ್ರಿಯೆಯಲ್ಲಿ ಯಾವುದೇ ಹಸ್ತಕ್ಷೇಪ ನಡೆದರೆ ಅದನ್ನು ಬಲವಾಗಿ ಎದುರಿಸುತ್ತೇವೆ ಎಂದೂ ಟ್ರಂಪ್ ಇರಾನ್ಗೆ ಎಚ್ಚರಿಕೆ ನೀಡಿದ್ದಾರೆ.

‘ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ ಭಾಗಿಯಾಗದೆ ಹೊರ್ಮುಜ್ ಜಲಸಂಧಿಯಲ್ಲಿ ಸಿಲುಕಿರುವ ವಿದೇಶಿ ಹಡಗುಗಳಿಗೆ ಸಹಾಯ ಮಾಡುವ ಉದ್ದೇಶದಿಂದ ‘ಪ್ರಾಜೆಕ್ಟ್ ಫ್ರೀಡಂ’ ಕಾರ್ಯಾಚರಣೆ ಆರಂಭಿಸಿದ್ದೇವೆ. ಹೊರ್ಮುಜ್ನಲ್ಲಿ ಸಿಲುಕಿಕೊಂಡಿರುವ ಹಡಗುಗಳಲ್ಲಿ ಆಹಾರ, ಕುಡಿಯುವ ನೀರು ಮತ್ತು ಸಿಬ್ಬಂದಿಯ ಆರೋಗ್ಯ ಕಾಪಾಡಲು ಅಗತ್ಯವಿರುವ ವಸ್ತುಗಳ ಕೊರತೆ ಉಂಟಾಗಿದೆ’ ಎಂದು ಟ್ರಂಪ್ ತಮ್ಮ ಒಡೆತನದ ಸಾಮಾಜಿಕ ಮಾಧ್ಯಮ ‘ಟ್ರೂಥ್ ಸೋಷಿಯಲ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಪ್ರಾಜೆಕ್ಟ್ ಫ್ರೀಡಂ’ಗಾಗಿ ಅಮೆರಿಕವು ಕ್ಷಿಪಣಿ ವಿಧ್ವಂಸಕ ನೌಕೆಗಳು, 100ಕ್ಕೂ ಹೆಚ್ಚು ವಿಮಾನಗಳು, ಮಾನವರಹಿತ ಡ್ರೋನ್ ಪ್ಲಾಟ್ಫಾರ್ಮ್ಗಳು ಮತ್ತು 15,000 ಸೈನಿಕರನ್ನು ನಿಯೋಜಿಸಲಿದೆ ಎಂದು ಟ್ರಂಪ್ ಹೇಳಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಇರಾನ್ ಜೊತೆ ನಮ್ಮ ಪ್ರತಿನಿಧಿಗಳು ಸಕಾರಾತ್ಮಕ ಚರ್ಚೆ ನಡೆಸುತ್ತಿದ್ದು, ಸದ್ಯದಲ್ಲೇ ಎಲ್ಲರಿಗೂ ಒಳ್ಳೆಯ ಸಂದೇಶ ಸಿಗಲಿದೆ ಎಂದು ಟ್ರಂಪ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಫೆಬ್ರುವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಇರಾನ್ ವಿರುದ್ಧ ಯುದ್ಧ ಆರಂಭಿಸಿದ ನಂತರ ಹೊರ್ಮುಜ್ ಜಲಸಂಧಿ ಬಹುತೇಕ ಮುಚ್ಚಲ್ಪಟ್ಟಿದೆ. ಇದರಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಉಂಟಾಗಿದ್ದು, ಕಚ್ಚಾ ತೈಲ ಬೆಲೆ ಕಳೆದ ವಾರ ಪ್ರತಿ ಬ್ಯಾರೆಲ್ಗೆ 126 ಡಾಲರ್ ತಲುಪಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.