ಲಂಡನ್: ‘ನಾನು ಭಾರತಕ್ಕೆ ಆಪ್ತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಜತೆಗೆ ಉತ್ತಮವಾದ ವೈಯಕ್ತಿಕ ಸಂಬಂಧ ಹೊಂದಿದ್ದೇನೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಹೇಳಿದ್ದಾರೆ.

ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಅವರ 75ನೇ ಹುಟ್ಟುಹಬ್ಬಕ್ಕೆ ನಾನು ಅವರಿಗೆ ಶುಭ ಕೋರಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.

‘ಉತ್ತಮ ಸಂಬಂಧದ ನಡುವೆಯೂ ನಾನು ಭಾರತದ ಮೇಲೆ ಅಧಿಕ ಶುಲ್ಕ ವಿಧಿಸಿದ್ದೇನೆ. ರಷ್ಯಾದಿಂದ ಭಾರತ ಕಚ್ಚಾತೈಲ ಖರೀದಿಸುತ್ತಿರುವ ಕಾರಣಕ್ಕೆ ಹೀಗೆ ಮಾಡಿದ್ದೇನೆ. ಇದರಿಂದ ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ಯುದ್ಧಕ್ಕೆ ತಡೆ ನೀಡುವ ಉದ್ದೇಶ ನನ್ನದಾಗಿದೆ. ತೈಲ ಬೆಲೆ ಕಡಿಮೆಯಾದರೆ ರಷ್ಯಾ ಯುದ್ಧ ನಿಲ್ಲಿಸುತ್ತದೆ ಎಂಬ ವಿಶ್ವಾಸ ನನಗಿದೆ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.