ವಾಷಿಂಗ್ಟನ್: ಹೊರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳಿಗೆ ಸುಂಕ ವಿಧಿಸಲು ಇರಾನ್ಗೆ ಬಿಡುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಪಾದಿಸಿದ್ದಾರೆ.

ಇರಾನ್ ಜತೆಗಿನ ಉದ್ವಿಗ್ನತೆಯ ನಡುವೆಯೇ ಹೊರ್ಮುಜ್ ಜಲಸಂಧಿಯು ಒಂದು ಅಂತರರಾಷ್ಟ್ರೀಯ ಜಲಮಾರ್ಗ ಎಂದು ಅವರು ಬಣ್ಣಿಸಿದ್ದಾರೆ.

‘ಹೊರ್ಮುಜ್ ಜಲಸಂಧಿಯಲ್ಲಿ ಸಂಚರಿಸುವ ಹಡಗುಗಳಿಗೆ ಶುಲ್ಕ ವಿಧಿಸಲು ಇರಾನ್ಗೆ ನಾವು ಅವಕಾಶ ನೀಡುವುದಿಲ್ಲ. ಅದು ಅಂತರರಾಷ್ಟ್ರೀಯ ಜಲಮಾರ್ಗವಾಗಿದೆ’ ಎಂದು ಹೇಳಿದ್ದಾರೆ.

‘ಅಂತರರಾಷ್ಟ್ರೀಯ ಜಲಮಾರ್ಗಗಳನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿರುವ ಇರಾನ್ ಕುರಿತು ಟೀಕಿಸಿರುವ ಅವರು, ಮಾತುಕತೆಗೆ ಅವಕಾಶ ನೀಡುವ ಸಲುವಾಗಿ ಮಾತ್ರ ನಾವು ಇಲ್ಲಿಯವರೆಗೆ ಸಂಯಮ ಕಾಯ್ದುಕೊಂಡಿದ್ದೇವೆ’ ಎಂದು ಅವರು ಗುಡುಗಿದ್ದಾರೆ.

ಇರಾನ್ನ ಸಂವಹನ ತಂತ್ರದ ಬಗ್ಗೆ ಟ್ರಂಪ್ ತಮ್ಮ ಒಡೆತನದ ಸಾಮಾಜಿಕ ಮಾಧ್ಯಮ ‘ಟ್ರೂಥ್ ಸೋಷಿಯಲ್’ನಲ್ಲಿ ಪೋಸ್ಟ್ ಮಾಡಿದ್ದು, ‘ಇರಾನಿಯನ್ನರು ಹೋರಾಡುವುದಕ್ಕಿಂತ ಹೆಚ್ಚಾಗಿ ಸುಳ್ಳು ಸುದ್ದಿ ಮಾಧ್ಯಮಗಳನ್ನು ಮತ್ತು ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸುವುದರಲ್ಲಿ ಹೆಚ್ಚು ನಿಸ್ಸೀಮರಾಗಿದ್ದಾರೆ’ ಎಂದು ಲೇವಡಿ ಮಾಡಿದ್ದಾರೆ.

ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹೊರ್ಮುಜ್ ಜಲಸಂಧಿಯ ಮೂಲಕ ಸಾರಿಗೆ ನೀತಿಗಳ ಬಗ್ಗೆ ಹೊಸ ಚರ್ಚೆಗಳು ನಡೆಯುತ್ತಿರುವ ನಡುವೆ ಈ ಬೆಳವಣಿಗೆ ಸಂಭವಿಸಿದೆ.

ಇರಾನ್ ಸಂಸತ್ತಿನ ಪ್ರಸ್ತಾವನೆ ಏನು?

ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತಾ ಆಯೋಗದ ಮುಖ್ಯಸ್ಥ ಇಬ್ರಾಹಿಂ ಅಜೀಜಿ ಮಾತನಾಡಿ, ಸಂಸತ್ತಿನ ಪ್ರಸ್ತಾವನೆಯ ಪ್ರಕಾರ, ಹೊರ್ಮುಜ್ ಜಲಸಂಧಿಯ ಮೂಲಕ ಸಾರಿಗೆ ಶುಲ್ಕವನ್ನು ಇರಾನ್ನ ರಾಷ್ಟ್ರೀಯ ಕರೆನ್ಸಿಯಾದ ‘ರಿಯಾಲ್’ನಲ್ಲಿ ಪಾವತಿಸಬೇಕಾಗಬಹುದು ಎಂದು ಹೇಳಿದ್ದರು.

ಮುಂಬೈನಲ್ಲಿರುವ ಇರಾನ್ನ ಕಾನ್ಸುಲೇಟ್ ಜನರಲ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಹೊರ್ಮುಜ್ ಜಲಸಂಧಿಯ ಭದ್ರತೆ ಮತ್ತು ಸುಸ್ಥಿರ ಅಭಿವೃದ್ಧಿಯ ಕಾರ್ಯತಂತ್ರದ ಯೋಜನೆಯಡಿ, ಇರಾನ್ ಸರ್ಕಾರವು ಅಗತ್ಯವಿದ್ದರೆ ಓಮನ್ ಜೊತೆ ಒಪ್ಪಂದಕ್ಕೆ ಸಹಿ ಹಾಕಬಹುದು ಎಂದು ಅಜೀಜಿ ತಿಳಿಸಿದ್ದಾರೆ. ಆದರೆ, ಇದು ದ್ವಿತೀಯ ಹಂತದ ನಿಬಂಧನೆಯಾಗಿದ್ದು, ಯೋಜನೆಯ ಮುಖ್ಯ ಸದ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.