ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಅವರ ಹಿರಿಯ ಪುತ್ರನ ಸ್ನೇಹಿತೆ ಕಿಂಬರ್ಲಿ ಗುಯಿಲ್‌ಫಾಯಿಲ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಫಾಕ್ಸ್ ನ್ಯೂಸ್ ಟಿ.ವಿ. ವಾಹಿನಿಯ ಮಾಜಿ ಉದ್ಯೋಗಿಯಾಗಿದ್ದ ಕಿಂಬರ್ಲಿ ಅವರು ಕೆಲವು ತಿಂಗಳುಗಳಿಂದ ಟ್ರಂಪ್ ಜೂನಿಯರ್ ಅವರ ಜತೆ ಡೇಟಿಂಗ್ ಮಾಡುತ್ತಿದ್ದಾರೆ. ಕೊರೋನಾ ದೃಢಪಟ್ಟ ಕೂಡಲೇ ಅವರನ್ನು ಪ್ರತ್ಯೇಕವಾಸದಲ್ಲಿ ಇಡಲಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ.

‘ಕಿಂಬರ್ಲಿ ಅವರು ಆರೋಗ್ಯವಾಗಿದ್ದಾರೆ, ಸೋಂಕಿನ ಲಕ್ಷಣಗಳು ಅವರಲ್ಲಿ ಕಾಣಿಸಿಲ್ಲವಾದ್ದರಿಂದ ಅವರನ್ನು ಮರು ಪರೀಕ್ಷೆಗೆ ಒಳಪಡಿಸಲಾಗುವುದು. ಟ್ರಂಪ್ ಅವರ ಪುತ್ರನಿಗೆ ಸೋಂಕು ತಗುಲಿಲ್ಲ ಎಂಬುದು ದೃಢಪಟ್ಟಿದೆ’ ಎಂದು ಟ್ರಂಪ್ ಅವರ ಸಿಬ್ಬಂದಿ ವಿಭಾಗದ ಮುಖ್ಯಸ್ಥ ಸರ್ಜಿಯೊ ಗೊರ್ ತಿಳಿಸಿದ್ದಾರೆ.

ಕಿಂಬರ್ಲಿ ಅವರು ಅಧ್ಯಕ್ಷ ಟ್ರಂಪ್ ಅವರ ಸಮೀಪವರ್ತಿಗಳಲ್ಲಿ, ಸೋಂಕಿಗೊಳಗಾದ ಮೂರನೇ ವ್ಯಕ್ತಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.