ವಾಷಿಂಗ್ಟನ್: ಇರಾನ್ನ ಹಿಡಿತದಲ್ಲಿರುವ ಹೊರ್ಮುಜ್ ಜಲಸಂಧಿಯಲ್ಲಿ ಸಿಲುಕಿರುವ ಹಡಗುಗಳ ಸುಗಮ ಸಂಚಾರಕ್ಕೆ ಸೂಕ್ತ ಮಾರ್ಗದರ್ಶನ ನೀಡಲು ಉದ್ದೇಶಿಸಿದ್ದ ‘ಪ್ರಾಜೆಕ್ಟ್ ಫ್ರೀಡಂ’ ಉಪಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

‘ಇರಾನ್ ವಿರುದ್ಧದ ಸೇನಾ ಕಾರ್ಯಾಚರಣೆಯಲ್ಲಿ ನಾವು ಪ್ರಚಂಡ ಯಶಸ್ಸು ಸಾಧಿಸಿದ್ದೇವೆ. ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದ ಏರ್ಪಡಿಸಲು ಸಂಧಾನಕಾರನಾಗಿ ಕಾರ್ಯನಿರ್ವಹಿಸುತ್ತಿರುವ ಪಾಕಿಸ್ತಾನ ಮತ್ತು ಇತರ ದೇಶಗಳ ವಿನಂತಿಯ ಮೇರೆಗೆ ಇರಾನ್ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುವ ಮೂಲಕ ಪರಸ್ಪರ ಒಪ್ಪಂದಕ್ಕೆ ಬಂದಿದ್ದೇವೆ’ ಎಂದು ಟ್ರಂಪ್ ತಮ್ಮ ಒಡೆತನದ ಸಾಮಾಜಿಕ ಮಾಧ್ಯಮ ‘ಟ್ರೂಥ್ ಸೋಷಿಯಲ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ಪೂರ್ಣ ಪ್ರಮಾಣದಲ್ಲಿ ಜಾರಿಯಲ್ಲಿರುತ್ತದೆ. ಆದರೆ, ಉಭಯ ದೇಶಗಳ ನಡುವಿನ ಶಾಂತಿ ಒಪ್ಪಂದವನ್ನು ಅಂತಿಮಗೊಳಿಸಲು ಮತ್ತು ಸಹಿ ಮಾಡಲು ಸಾಧ್ಯವೇ ಎಂಬುದನ್ನು ಪರಿಶೀಲಿಸುವ ಸಲುವಾಗಿ ‘ಪ್ರಾಜೆಕ್ಟ್ ಫ್ರೀಡಂ’ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಟ್ರಂಪ್ ತಿಳಿಸಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಹೊರ್ಮುಜ್ ಜಲಸಂಧಿಯಲ್ಲಿ ಸಿಲುಕಿರುವ ಹಡಗುಗಳಿಗೆ ನೆರವಾಗಲು ಟ್ರಂಪ್ ಭಾನುವಾರವಷ್ಟೇ ‘ಪ್ರಾಜೆಕ್ಟ್ ಫ್ರೀಡಂ’ ಅನ್ನು ಘೋಷಿಸಿದ್ದರು.

‘ಪ್ರಾಜೆಕ್ಟ್ ಫ್ರೀಡಂ’ಗಾಗಿ ಅಮೆರಿಕವು ಕ್ಷಿಪಣಿ ವಿಧ್ವಂಸಕ ನೌಕೆಗಳು, 100ಕ್ಕೂ ಹೆಚ್ಚು ವಿಮಾನಗಳು, ಮಾನವರಹಿತ ಡ್ರೋನ್ ಪ್ಲಾಟ್ಫಾರ್ಮ್ಗಳು ಮತ್ತು 15,000 ಸೈನಿಕರನ್ನು ನಿಯೋಜಿಸಲಿದೆ ಎಂದು ಟ್ರಂಪ್ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.