ಟೆಲ್ ಅವಿವ್/ಜೆರುಸಲೆಮ್/ವಾಷಿಂಗ್ಟನ್: ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ತೆರೆಯಲು ಇರಾನ್ಗೆ 48 ಗಂಟೆಗಳ ಗಡುವು ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇಲ್ಲದಿದ್ದರೆ ವಿದ್ಯುತ್ ಸ್ಥಾವರಗಳನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಯುದ್ಧವನ್ನು ಅಂತ್ಯಗೊಳಿಸುವ ಬಗ್ಗೆ ಮಾತನಾಡಿದ ಒಂದು ದಿನದ ನಂತರ ಟ್ರಂಪ್ ಹೇಳಿಕೆಯಲ್ಲಿ ನಾಟಕೀಯ ಬದಲಾವಣೆ ಕಂಡುಬಂದಿದೆ.

‘ಈ ಕ್ಷಣದಿಂದ 48 ಗಂಟೆಗಳ ಒಳಗೆ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ತೆರೆಯದಿದ್ದರೆ, ಅಮೆರಿಕವು ಇರಾನ್ನ ವಿವಿಧ ವಿದ್ಯುತ್ ಸ್ಥಾವರಗಳ ಮೇಲೆ ದಾಳಿ ಮಾಡಿ ನಾಶಪಡಿಸುತ್ತದೆ. ದಾಳಿಯು ಇರಾನ್ನ ಅತಿದೊಡ್ಡ ಸ್ಥಾವರದಿಂದ ಆರಂಭವಾಗುತ್ತದೆ’ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ಹೇಳಿದ್ದಾರೆ.

ಈ ಮೂಲಕ ಸಂಘರ್ಷವು ಮತ್ತೊಂದು ಹಂತಕ್ಕೆ ತಲುಪಿದೆ ಎಂದು ವರದಿ ತಿಳಿಸಿದೆ.

ಈ ನಡುವೆ, ಇರಾನ್ ಪಡೆಗಳು ಮೊದಲ ಬಾರಿಗೆ ದೀರ್ಘ ಶ್ರೇಣಿಯ ಕ್ಷಿಪಣಿಗಳನ್ನು ಹಾರಿಸಿವೆ ಎಂದು ಇಸ್ರೇಲ್ ಅಧಿಕಾರಿಗಳು ತಿಳಿಸಿದ್ದಾರೆ, ಇದು ಪಶ್ಚಿಮ ಏಷ್ಯಾದ ಆಚೆಗೆ ದಾಳಿಯ ಅಪಾಯವನ್ನು ವಿಸ್ತರಿಸಿದೆ.

ಹಿಂದೂ ಮಹಾಸಾಗರದಲ್ಲಿರುವ ಅಮೆರಿಕ ಮತ್ತು ಬ್ರಿಟನ್ನ ಡಿಯಾಗೋ ಗಾರ್ಸಿಯಾ ದ್ವೀಪದ ಮಿಲಿಟರಿ ನೆಲೆ ಮೇಲೆ ಇರಾನ್ 4,000 ಕಿ.ಮೀ ವ್ಯಾಪ್ತಿಯ ಎರಡು ಖಂಡಾಂತರ ಕ್ಷಿಪಣಿಗಳನ್ನು ಹಾರಿಸಿದೆ ಎಂದು ಇಸ್ರೇಲ್ ಮಿಲಿಟರಿ ಮುಖ್ಯಸ್ಥ ಇಯಾಲ್ ಜಮೀರ್ ಹೇಳಿದ್ದಾರೆ.

ಫೆಬ್ರುವರಿ 28ರಂದು ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ಆರಂಭಿಸಿದ ನಂತರ ಇದೇ ಮೊದಲ ಬಾರಿಗೆ ಇರಾನ್ ದೀರ್ಘ ಶ್ರೇಣಿಯ ಕ್ಷಿಪಣಿಗಳನ್ನು ಬಳಸಿದೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.