ಫ್ಲಾರಿಡಾ: ಇರಾನ್ ಮೇಲೆ ನಡೆಸುತ್ತಿರುವ ಸೇನಾ ಕಾರ್ಯಾಚರಣೆಯನ್ನು ‘ವಿಹಾರ’ ಎಂದು ಕರೆದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದು ಶೀಘ್ರದಲ್ಲೇ ಕೊನೆಗೊಳ್ಳಲಿದೆ ಹೇಳಿದ್ದಾರೆ.

ಸೇನಾ ಕಾರ್ಯಾಚರಣೆ ಯಾವಾಗ ಕೊನೆಗೊಳ್ಳುತ್ತದೆ ಎಂದು ವರದಿಗಾರರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಟ್ರಂಪ್, ‘ಅದಷ್ಟು ಬೇಗ ಕೊನೆಗೊಳ್ಳಲಿದೆ. ಇರಾನ್ ನಾಯಕತ್ವ, ಸೇನೆ ಸೇರಿದಂತೆ ಅವರ ಬಳಿ ಇದ್ದ ಎಲ್ಲವನ್ನೂ ನಾಶ ಮಾಡಲಾಗಿದೆ. ಅಗತ್ಯವಿದ್ದರೆ ಅಮೆರಿಕ ಮುಂದೆಯೂ ಯುದ್ಧ ಸಾರಲಿದೆ’ ಎಂದು ಪುನರುಚ್ಚರಿಸಿದ್ದಾರೆ.

‘ಇರಾನ್ ಮಧ್ಯಪ್ರಾಚ್ಯವನ್ನು ವಶಪಡಿಸಿಕೊಳ್ಳಲಿದೆ. ಜತೆಗೆ, ಇಸ್ರೇಲ್ ಮೇಲೆ ದಾಳಿ ನಡೆಸಲು ಪ್ರಯತ್ನಿಸಲಿದೆ. ಆದ್ದರಿಂದ ಈ ಎಲ್ಲಾ ಬೆಳವಣಿಗೆಗಳನ್ನು ಅವಲೋಕಿಸಿ ಸೂಕ್ತ ಸಮಯದಲ್ಲಿ ಸೇನಾ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದಿದ್ದಾರೆ.

‘ಇರಾನ್ ವಿರುದ್ಧದ ಸೇನಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವುದಕ್ಕೆ ನಮಗೆ ತುಂಬಾ ಹೆಮ್ಮೆಯಿದೆ. ಇದು ಶೀಘ್ರದಲ್ಲೇ ಕೊನೆಗೊಳ್ಳಲಿದೆ. ಒಂದು ವೇಳೆ ಇರಾನ್ ಮತ್ತೆ ಬಾಲ ಬಿಚ್ಚಿದ್ರೆ, ತಕ್ಕ ಪಾಠ ಕಲಿಸುತ್ತೇವೆ’ ಎಂದು ಟ್ರಂಪ್ ಎಚ್ಚರಿಸಿದ್ದಾರೆ.

ಅಮೆರಿಕದ ‘ಆಪರೇಷನ್ ಎಪಿಕ್ ಫ್ಯೂರಿ’ಯ ಭಾಗವಾಗಿ ಇರಾನ್ನ ಹಲವು ಪ್ರಾಂತ್ಯಗಳ ಮೇಲೆ ದಾಳಿ ನಡೆಸಿದ್ದೇವೆ. ಕಾರ್ಯಾಚರಣೆ ಆರಂಭಿಸಿದ ಮೊದಲೆರಡು ದಿನದಲ್ಲೇ ಇರಾನ್ ಸೇನೆ ಸಂಪೂರ್ಣವಾಗಿ ನಾಶವಾಗಿದೆ. ಇದು ನಮ್ಮ ಸೇನೆಯ ‘ಅದ್ಭುತ ಯಶಸ್ಸು’ ಎಂದು ಅವರು ಹೇಳಿದ್ದಾರೆ.

ಇರಾನ್ನ ನೌಕಾಪಡೆ, ವಾಯುಪಡೆ, ವಾಯು ರಕ್ಷಣಾ ವ್ಯವಸ್ಥೆ, ಕಣ್ಗಾವಲು ವ್ಯವಸ್ಥೆ, ದೂರಸಂಪರ್ಕ ವ್ಯವಸ್ಥೆ ಸೇರಿದಂತೆ ಎಲ್ಲವನ್ನೂ ಸ್ಫೋಟಿಸಿದ್ದೇವೆ ಎಂದು ತಿಳಿಸಿದ್ದಾರೆ.

ಆಯತೊಲ್ಲಾ ಅಲಿ ಖಮೇನಿ ಅವರ ಪುತ್ರ, ಇರಾನ್ನ ಹೊಸ ಪರಮೋಚ್ಚ ನಾಯಕ ಮೊಜ್ತಾಬಾ ಖಮೇನಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಟ್ರಂಪ್, ‘ಮೊಜ್ತಾಬಾ ಆಯ್ಕೆ ಬಗ್ಗೆ ನನಗೆ ನಿರಾಶೆಯಾಗಿದೆ’ ಎಂದಿದ್ದಾರೆ.

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಹತರಾದ ಇರಾನ್ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಉತ್ತರಾಧಿಕಾರಿಯನ್ನಾಗಿ 57 ವರ್ಷದ ಮೊಜ್ತಾಬಾ ಖಮೇನಿ ಅವರನ್ನು 88 ಸದಸ್ಯರ ತಜ್ಞರ ಮಂಡಳಿ ಆಯ್ಕೆ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.