ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರೀಲಂಕಾಕ್ಕೆ ಸಚಿವ ಜೈಶಂಕರ್ ಭೇಟಿ: ಉಭಯ ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಮಾತುಕತೆ

Published 20 ಜೂನ್ 2024, 5:44 IST
Last Updated 20 ಜೂನ್ 2024, 5:44 IST
ಅಕ್ಷರ ಗಾತ್ರ

ಕೊಲಂಬೊ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಇಂದು( ಗುರುವಾರ) ಶ್ರೀಲಂಕಾಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಉಭಯ ರಾಷ್ಟ್ರಗಳ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವ ಸಲುವಾಗಿ ಮಾತುಕತೆ ನಡೆಸಲಿದ್ದಾರೆ.

ಶ್ರೀಲಂಕಾ ಭೇಟಿ ಸಂಬಂಧ ’ಎಕ್ಸ್‌’ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಜೈಶಂಕರ್, ‘ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ ಶ್ರೀಲಂಕಾಕ್ಕೆ ಇದೇ ಮೊದಲ ಭೇಟಿ’ ಎಂದು ಬರೆದುಕೊಂಡಿದ್ದಾರೆ.

ಕೊಲಂಬೊಗೆ ಆಗಮಿಸಿದ ಜೈಶಂಕರ್‌ ಅವರನ್ನು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ತಾರಕ ಬಾಲಸೂರ್ಯ, ಪೂರ್ವ ಪ್ರಾಂತ್ಯದ ಗವರ್ನರ್ ಸೆಂಥಿಲ್ ಥೋಂಡಮಾನ್ ಅವರು ಬರಮಾಡಿಕೊಂಡರು.

ಉಭಯ ರಾಷ್ಟ್ರಗಳ ಸಂಪರ್ಕ ಯೋಜನೆಯನ್ನು ಬಲವರ್ಧನೆಗೊಳಿಸುವುದು ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

‘ಜೈಶಂಕರ್‌ ಅವರ ಶ್ರೀಲಂಕಾ ಪ್ರವಾಸವು ‘ನೆರೆಯವರೇ ಮೊದಲು’ ಎಂಬ ಭಾರತದ ನೀತಿಯ ಭಾಗವಾಗಿದೆ. ಉಭಯರಾಷ್ಟ್ರಗಳ ದ್ವಿಪಕ್ಷೀಯ ಬಾಂಧವ್ಯದ ಪ್ರತೀಕವಾಗಿದೆ. ಭೇಟಿಯ ವೇಳೆ ಜೈಶಂಕರ್‌ ಅವರು ಹಲವು ವಿಚಾರಗಳ ಕುರಿತಂತೆ ಶ್ರೀಲಂಕಾದ ಉನ್ನತ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಈ ಭೇಟಿಯು ಉಭಯ ರಾಷ್ಟ್ರಗಳ ಸಂಪರ್ಕ ಯೋಜನೆ ಹಾಗೂ ಸಹಕಾರ ಯೋಜನೆಗಳಿಗೆ ವೇಗ ನೀಡಲಿದೆ’ ಎಂದು ವಿದೇಶಾಂಗ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT