ಬೀಜಿಂಗ್: ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಮಂಗಳವಾರ ಚೀನಾದ ಅಧ್ಯಕ್ಷ ಷಿ ಜಿನ್ಪಿಂಗ್ ಅವರನ್ನು ಭೇಟಿಯಾದರು.

‘ಎಸ್ಸಿಒ ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರೊಂದಿಗೆ ಬೀಜಿಂಗ್ನಲ್ಲಿ ಮಂಗಳವಾರ ಬೆಳಿಗ್ಗೆ ಅಧ್ಯಕ್ಷ ಷಿ ಜಿನ್ಪಿಂಗ್ ಅವರನ್ನು ಭೇಟಿಯಾದೆ’ ಎಂದು ಜೈಶಂಕರ್ ‘ಎಕ್ಸ್’ನಲ್ಲಿ ಹೇಳಿದ್ದಾರೆ.

‘ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಶುಭಾಶಯಗಳನ್ನು ಚೀನಾ ಅಧ್ಯಕ್ಷರಿಗೆ ತಿಳಿಸಿದ್ದೇನೆ. ಭಾರತ–ಚೀನಾ ದ್ವಿಪಕ್ಷೀಯ ಸಂಬಂಧಗಳ ಈಚೆಗಿನ ಬೆಳವಣಿಗೆಯ ಬಗ್ಗೆ ಷಿ ಅವರೊಂದಿಗೆ ಮಾತನಾಡಿದೆ’ ಎಂದು ಬರೆದುಕೊಂಡಿದ್ದಾರೆ.

ಚೀನಾದ ತಿಯಾನ್ಜಿನ್ ನಗರದಲ್ಲಿ ಮಂಗಳವಾರ ಆರಂಭವಾದ ಶಾಂಘೈ ಸಹಕಾರ ಸಂಘಟನೆ (ಎಸ್ಸಿಒ) ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಜೈಶಂಕರ್ ಚೀನಾಕ್ಕೆ ಭೇಟಿ ನೀಡಿದ್ದಾರೆ.

ಎಸ್ಸಿಒ ಕಾರ್ಯವಿಧಾನ ಸುಧಾರಿಸಬೇಕು: ಭದ್ರತೆಗೆ ಸಂಬಂಧಿಸಿದ ಬೆದರಿಕೆಗಳು ಮತ್ತು ಸವಾಲುಗಳನ್ನು ಎದುರಿಸಲು ಎಸ್ಸಿಒ ಗುಂಪು ತನ್ನ ಕಾರ್ಯವಿಧಾನಗಳನ್ನು ಸುಧಾರಿಸಬೇಕು ಎಂದು ಷಿ ಜಿನ್ಪಿಂಗ್ ಅವರು ಎಸ್ಸಿಒ ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರುಗಳಿಗೆ ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.