ಟೆಹರಾನ್ : ಇರಾನ್‌ನ ವಾಯವ್ಯ ಪ್ರಾಂತ್ಯದಲ್ಲಿ ಶನಿವಾರ ರಾತ್ರಿ 5.9 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ ಹಾಗೂ 800 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಭೂಕಂಪನದಿಂದಾಗಿ ಮನೆಗಳು, ಕಟ್ಟಡಗಳು ಹಾಗೂ ವಾಹನಗಳು ನಾಶಗೊಂಡಿವೆ. ನೂರಾರು ಜನರು ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ.

‘ಪಶ್ಚಿಮ ಅಜರ್‌ಬೈಜಾನ್ ಪ್ರಾಂತ್ಯದ 2 ಲಕ್ಷ ಜನಸಂಖ್ಯೆ ಹೊಂದಿರುವ ಖೋಯ್ ನಗರದಲ್ಲಿ ಈ ಭೂಕಂಪನ ಸಂಭವಿಸಿತು’ ಎಂದು ಟೆಹರಾನ್ ವಿಶ್ವವಿದ್ಯಾಲಯದ ಭೂಕಂಪಶಾಸ್ತ್ರ ವಿಭಾಗ ತಿಳಿಸಿದೆ.

ಪಾಕಿಸ್ತಾನದ ಹಲವು ಪ್ರದೇಶಗಳಲ್ಲೂ ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆಯ ಕಂಪನದ ಅನುಭವವಾಗಿದ್ದು, ಪಂಜಾಬ್ ಪ್ರಾಂತ್ಯದ ಅಟ್ಟೋಕ್ ಸಮೀಪ ಕಂಪನದ ಕೇಂದ್ರ ಬಿಂದು ಇತ್ತು ಎಂದು ಯುರೋಪಿಯನ್ ಮೆಡಿಟರೇನಿಯನ್ ಸಿಸ್ಮೊಲಾಜಿಕಲ್ ಸೆಂಟರ್ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.