ಅಲಾಸ್ಕಾ(ಅಮೆರಿಕ): ಅಮೆರಿಕದ ಅಲಾಸ್ಕಾ ರಾಜ್ಯದಲ್ಲಿ ಗುರುವಾರ ಮುಂಜಾನೆ (ಸ್ಥಳೀಯ ಕಾಲಮಾನ) ರಿಕ್ಟರ್ ಮಾಪಕದಲ್ಲಿ 7.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ (ಎನ್ಸಿಎಸ್) ಹೇಳಿಕೆ ತಿಳಿಸಿದೆ.

ಸಮುದ್ರದ 36 ಕಿ.ಮೀ ಆಳದಲ್ಲಿ ಬೃಹತ್ ಭೂಕಂಪ ಸಂಭವಿಸಿದ್ದು, ಪಶ್ಚಾತ್ ಕಂಪನಗಳಿಗೆ ಸಾಕ್ಷಿಯಾಗಿದೆ ಎಂದು ಎನ್ಸಿಎಸ್ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ.

ಸಮುದ್ರದ ಕಡಿಮೆ ಆಳದಲ್ಲಿ ಸಂಭವಿಸಿದ ಭೂಕಂಪ ಇದಾಗಿದ್ದು, ಇಂತಹ ಭೂಕಂಪಗಳು ಆಳ ಸಮುದ್ರ ಭೂಕಂಪಗಳಿಗಿಂತ ಹೆಚ್ಚು ಅಪಾಯಕಾರಿ. ಏಕೆಂದರೆ, ಆಳವಿಲ್ಲದ ಭೂಕಂಪಗಳ ಪಶ್ಚಾತ್ ಕಂಪನಗಳು ಬಹುಬೇಗ ಮೇಲ್ಮೈಗೆ ತಲುಪುವ ಸಾಧ್ಯತೆ ಇದೆ. ಇದರ ಪರಿಣಾಮ ಭೂಮಿಯಲ್ಲಿ ದೊಡ್ಡ ಕಂಪನ ಮತ್ತು ಸಾವು ನೋವುಗಳ ಸಾಧ್ಯತೆ ಇರುತ್ತದೆ ಎಂದು ವರದಿ ತಿಳಿಸಿದೆ.

ಅಮೆರಿಕದ ಸುನಾಮಿ ಎಚ್ಚರಿಕೆ ವ್ಯವಸ್ಥೆಯ ಪ್ರಕಾರ, ಅಲಾಸ್ಕಾ ಕೊಲ್ಲಿಯಲ್ಲಿ ಸಂಭವಿಸಿದ ಭೂಕಂಪದ ನಂತರ ಕರಾವಳಿಯ ಕೆಲವು ಭಾಗಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಅಮೆರಿಕ ರಾಷ್ಟ್ರೀಯ ಹವಾಮಾನ ಸೇವಾ ಕೇಂದ್ರವು ಈ ಎಚ್ಚರಿಕೆ ನೀಡಿದ್ದು, ಕರಾವಳಿಯ ಜನರು ಎತ್ತರದ ಪ್ರದೇಶಗಳಿಗೆ ಅಥವಾ ಒಳನಾಡಿಗೆ ಸ್ಥಳಾಂತರಗೊಳ್ಳಬೇಕು. ಕಡಲತೀರಗಳು ಮತ್ತು ಜಲಮಾರ್ಗಗಳಿಂದ ದೂರವಿರಬೇಕೆಂಬುದನ್ನು ಸೂಚಿಸುತ್ತದೆ.

ಅಮೆರಿಕದಲ್ಲಿ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಅಲಾಸ್ಕಾದಲ್ಲಿ ಹೆಚ್ಚು ಭೂಕಂಪ ಸಂಭವಿಸುತ್ತವೆ. ರಾಜ್ಯದ ಜನಸಂಖ್ಯೆಯ ಮುಕ್ಕಾಲು ಭಾಗಕ್ಕಿಂತ ಹೆಚ್ಚು ಜನರು 7 ತೀವ್ರತೆಯ ಭೂಕಂಪ ಸಂಭವಿಸಬಹುದಾದ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.