ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಾಕಿಸ್ತಾನದಲ್ಲಿ 4.7 ತೀವ್ರತೆಯ ಭೂಕಂಪ

Published 19 ಜೂನ್ 2024, 14:00 IST
Last Updated 19 ಜೂನ್ 2024, 14:00 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿ ಬುಧವಾರ 4.7 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಜಧಾನಿ ಇಸ್ಲಾಮಾಬಾದ್‌, ರಾವಲ್ಪಿಂಡಿ, ಪೆಶಾವರ ಸೇರಿದಂತೆ ಪಾಕಿಸ್ತಾನದ ಹಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿದೆ.

ಭೂಕಂಪನ ಕೇಂದ್ರ ಬಿಂದುವು ಆಗ್ನೇಯ ಅಫ್ಗಾನಿಸ್ತಾನ ವಲಯದಲ್ಲಿ, ಭೂಮಿಯ ಮೇಲ್ಮೈನಿಂದ 98 ಕಿ.ಮೀ. ಆಳದಲ್ಲಿ ಪತ್ತೆಯಾಗಿದೆ ಎಂದು ಪಾಕಿಸ್ತಾನದ ರಾಷ್ಟ್ರೀಯ ಭೂಕಂಪ ನಿಗಾ ಕೇಂದ್ರ ತಿಳಿಸಿದೆ. ಘಟನೆಯಲ್ಲಿ ಮೃತಪಟ್ಟಿರುವ ಬಗ್ಗೆಯಾಗಲೀ, ಆಸ್ತಿ–ಪಾಸ್ತಿಗಳಿಗೆ ಹಾನಿಯಾಗಿರುವ ಬಗ್ಗೆಯಾಗಲೀ ವರದಿಯಾಗಿಲ್ಲ.

ಇದೇ ತಿಂಗಳ ಆರಂಭದಲ್ಲಿಯೂ ಕರಾಚಿ ಸೇರಿದಂತೆ ಪಾಕಿಸ್ತಾನದ ಹಲವು ಭಾಗಗಳಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT