ಪೆಶಾವರ: ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿರುವ ಸೇನಾ ದಂಡು ಪ್ರದೇಶದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಪಾಕಿಸ್ತಾನದ ಎಂಟು ಯೋಧರು ಬಲಿಯಾಗಿದ್ದಾರೆ.

ಹತ್ತು ಉಗ್ರರ ಗುಂಪು ನಡೆಸಿದ ಈ ದಾಳಿ ನಡೆಸಿದ್ದರು. ಸೇನೆ ನಡೆಸಿದ ಪ್ರತಿ ದಾಳಿಯಲ್ಲಿ ಹತ್ತು ಭಯೋತ್ಪಾದಕರೂ ಮೃತಪಟ್ಟಿದ್ದಾರೆ ಎಂದು ಸೇನಾ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಪಾಕಿಸ್ತಾನದ ಸೇನೆಯು, ‘ಬಾನು ಸೇನಾ ದಂಡು ಪ್ರದೇಶಕ್ಕೆ ನುಗ್ಗಿ ದೊಡ್ಡ ದಾಳಿ ನಡೆಸಲು ಉಗ್ರರು ಈ ಕೃತ್ಯವೆಸಗಿದ್ದು, ಪ್ರತಿದಾಳಿಯ ಮೂಲಕ ಎಲ್ಲ ಉಗ್ರರನ್ನು ಸೇನೆ ಸದೆಬಡಿದಿದೆ. ಇದರೊಂದಿಗೆ ದೊಡ್ಡ ಅನಾಹುತವೊಂದು ತಪ್ಪಿದೆ’ ಎಂದು ತಿಳಿಸಿದೆ.

ಪಾಕಿಸ್ತಾನದ ವಿರುದ್ಧದ ಭಯೋತ್ಪಾದಕ ಚಟುವಟಿಕೆಗಳಿಗೆ ಅಫ್ಗಾನಿಸ್ತಾನದ ನೆಲ ಬಳಸುವುದನ್ನು ತಡೆಯುವಂತೆ ಮತ್ತು ಭಯೋತ್ಪಾದಕರ ವಿರುದ್ದ ಕ್ರಮ ಕೈಗೊಳ್ಳುವಂತೆ ಅಫ್ಗಾನಿಸ್ತಾನಕ್ಕೆ ಪಾಕಿಸ್ತಾನ ಒತ್ತಾಯಿಸುತ್ತಲೇ ಬಂದಿದೆ. ಅಲ್ಲದೆ, ಅಫ್ಗಾನಿಸ್ತಾನದಿಂದ ಎದುರಾಗುವ ಯಾವುದೇ ದಾಳಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಪಾಕಿಸ್ತಾನ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.