ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11 ನಿಮಿಷಕ್ಕೆ ಒಬ್ಬ ಯುವತಿ ಅಥವಾ ಮಹಿಳೆ ಆಪ್ತರಿಂದಲೇ ಹತ್ಯೆ: ವಿಶ್ವಸಂಸ್ಥೆ

Last Updated 23 ನವೆಂಬರ್ 2022, 2:57 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ನಿಕಟ ಸಂಗಾತಿ ಅಥವಾ ಕುಟುಂಬದ ಸದಸ್ಯರಿಂದಲೇ ಪ್ರತಿ 11 ನಿಮಿಷಕ್ಕೆ ಒಬ್ಬ ಮಹಿಳೆ ಅಥವಾ ಯುವತಿಯ ಹತ್ಯೆ ನಡೆಯುತ್ತಿದೆ ಎಂದು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್ ಹೇಳಿದ್ದಾರೆ.

ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿದ್ದು ಮಾನವ ಹಕ್ಕುಗಳ ಉಲ್ಲಂಘನೆಯೂ ವ್ಯಾಪಕವಾಗಿದೆ. ಈ ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲ ದೇಶಗಳು ರಾಷ್ಟ್ರೀಯ ಕ್ರಿಯಾ ಯೋಜನೆ ರೂಪಿಸಬೇಕು ಎಂದು ಅವರು ಕರೆ ನೀಡಿದ್ದಾರೆ.ಇಡೀ ದೇಶವನ್ನು ಬೆಚ್ಚಿಬೀಳಿಸಿದ ದೆಹಲಿಯ ಶ್ರದ್ಧಾ ವಾಲಕರ್‌ ಹತ್ಯೆ ಬೆನ್ನಲ್ಲೇ ಈ ಹೇಳಿಕೆ ನೀಡಿದ್ದಾರೆ.

ನವೆಂಬರ್ 25ರಂದು ನಡೆಯುವ ಮಹಿಳೆಯರ ಮೇಲಿನ ದೌರ್ಜನ್ಯ ತಡೆ ದಿನದ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

‘ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯವು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಕೋವಿಡ್ ಸಾಂಕ್ರಾಮಿಕದಿಂದ ಆರ್ಥಿಕ ಪ್ರಕ್ಷುಬ್ಧತೆ ಮತ್ತು ಇತರ ಒತ್ತಡಗಳು ಇನ್ನಷ್ಟು ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಕಾರಣವಾಗುತ್ತಿದೆ ಎಂದಿದ್ದಾರೆ.

ಲೈಂಗಿಕ ದೌರ್ಜನ್ಯ, ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಚಿತ್ರಗಳನ್ನು ಅಪ್‌ಲೋಡ್‌ ಮಾಡುವುದು ಸೇರಿದಂತೆ ಮಹಿಳೆಯರು ಮತ್ತು ಯುವತಿಯರಿಗೆ ಕಿರುಕುಳ ನೀಡಲಾಗುತ್ತಿದೆ. ಈ ರೀತಿಯ ತಾರತಮ್ಯ, ಹಿಂಸಾಚಾರ ಮತ್ತು ನಿಂದನೆಯಿಂದಾಗಿ ಎಲ್ಲಾ ಹಂತಗಳಲ್ಲಿ ಮಹಿಳೆಯರು ಮತ್ತು ಯುವತಿಯರ ಭಾಗವಹಿಸುವಿಕೆ ಸೀಮಿತವಾಗುವಂತಾಗಿದೆ. ಅಲ್ಲದೆ ಅವರ ಮೂಲಭೂತ ಹಕ್ಕುಗಳು ಮತ್ತು ಸ್ವಾತಂತ್ರ್ಯಕ್ಕೆ ಧಕ್ಕೆ ಬರುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಮಹಿಳಾ ಹಕ್ಕುಗಳ ಸಂಘಟನೆಗಳು ಮತ್ತು ಚಳವಳಿಗಳಿಗೆ ಸರ್ಕಾರ ನೀಡುವ ನೆರವು 2026ರ ವೇಳೆಗೆ ಶೇ 50ರಷ್ಟು ಹೆಚ್ಚಾಗಬೇಕು. ಮಹಿಳಾ ಹಕ್ಕುಗಳ ಪರವಾಗಿ ನಾವೆಲ್ಲ ಧ್ವನಿ ಎತ್ತಬೇಕು. ’ನಾವೆಲ್ಲರೂ ಸ್ತ್ರೀವಾದಿಗಳು’ ಎಂದು ಹೆಮ್ಮೆಯಿಂದ ಘೋಷಿಸಬೇಕು ಎಂದು ಅವರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT