ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ | ಗಲ್ಲಿಗೇರಿಸಲಾದ ಭುಟ್ಟೊ ವಿಚಾರಣೆ ನ್ಯಾಯಯುತವಾಗಿರಲಿಲ್ಲ ಎಂದ SC

Published 6 ಮಾರ್ಚ್ 2024, 16:14 IST
Last Updated 6 ಮಾರ್ಚ್ 2024, 16:14 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ‘ಮರಣದಂಡನೆ ಶಿಕ್ಷೆಗೆ ಗುರಿಯಾದ ಪಾಕಿಸ್ತಾನದ ಮಾಜಿ ಪ್ರಧಾನಿ ಝುಲ್ಫಿಕರ್ ಅಲಿ ಭುಟ್ಟೊ ಅವರ ವಿಚಾರಣೆ ನ್ಯಾಯೋಚಿತವಾಗಿರಲಿಲ್ಲ ಮತ್ತು ಸರಿಯಾದ ಪ್ರಕ್ರಿಯೆಯಲ್ಲಿ ನಡೆಯಲಿಲ್ಲ’ ಎಂದು ಪಾಕಿಸ್ತಾನದ ಸುಪ್ರೀಂ ಕೋರ್ಟ್ ಬುಧವಾರ ಅಭಿಪ್ರಾಯಪಟ್ಟಿದೆ.

1979ರಲ್ಲಿ ಭುಟ್ಟೊ ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು. ಅ ಸಂದರ್ಭದಲ್ಲಿ ಜನರಲ್ ಮಹಮ್ಮದ್ ಜಿಯಾ ಉಲ್ ಹಕ್‌ ಸೇನಾ ಮುಖ್ಯಸ್ಥರಾಗಿದ್ದರು. ಈ ಹೈ ಪ್ರೊಫೈಲ್ ಪ್ರಕರಣ ಕುರಿತು ನಡೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್‌ ಸರ್ವಾನುಮತದಿಂದ ಈ ಅಭಿಪ್ರಾಯವನ್ನು ಪ್ರಕಟಿಸಿತು.

ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಸಂಸ್ಥಾಪಕ ಭುಟ್ಟೊಗೆ ವಿಧಿಸಲಾದ ಮರಣ ದಂಡನೆ ಶಿಕ್ಷೆ ಕುರಿತು ಸಲ್ಲಿಕೆಯಾಗಿದ್ದ ಅಧ್ಯಕ್ಷೀಯ ಉಲ್ಲೇಖ ಕುರಿತು ಸುಪ್ರೀಂ ಕೋರ್ಟ್‌ನ 9 ನ್ಯಾಯಮೂರ್ತಿಗಳ ಪೂರ್ಣ ಪೀಠದ ನಿರ್ಣಯವನ್ನು ಮುಖ್ಯ ನ್ಯಾಯಮೂರ್ತಿ ಖಾಜಿ ಫೀಜ್ ಇಸಾ ಅವರು ಘೋಷಿಸಿದರು. 

ಕೊಲೆ ಪ್ರಕರಣದಲ್ಲಿ 1979ರ ಏ. 4ರಂದು ಭುಟ್ಟೊ ಅವರನ್ನು ಗಲ್ಲಿಗೇರಿಸಲಾಗಿತ್ತು. ಕೆಲವರ ಕುಮ್ಮಕ್ಕಿನಿಂದ ತಮ್ಮ ತಂದೆಗೆ ಶಿಕ್ಷೆ ವಿಧಿಸಲಾಗಿತ್ತು. ಹೀಗಾಗಿ ಈ ಪ್ರಕರಣ ಮತ್ತು ಗರಿಷ್ಠ ಪ್ರಮಾಣದ ಶಿಕ್ಷೆ ವಿಧಿಸಿದ್ದರ ಕುರಿತು ಪರಾಮರ್ಶಿಸಲು 2011ರಲ್ಲಿ ಅಂದಿನ ಅಧ್ಯಕ್ಷ ಆಸೀಫ್ ಅಲಿ ಝರ್ದಾರಿ ಅವರು ಸುಪ್ರೀಂ ಕೋರ್ಟ್‌ ಅನ್ನು ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT