ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಾಕ್‌ ‘ಅಣ್ವಸ್ತ್ರ ಪಿತಾಮಹ’, ಭೋಪಾಲ್‌ ಮೂಲದ ವಿಜ್ಞಾನಿ ಎ.ಖಾದಿರ್‌ ಖಾನ್‌ ನಿಧನ

Last Updated 10 ಅಕ್ಟೋಬರ್ 2021, 10:13 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಪಾಕಿಸ್ತಾನದ ಹಿರಿಯ ಪರಮಾಣು ವಿಜ್ಞಾನಿ ಡಾ ಅಬ್ದುಲ್ ಖಾದಿರ್ ಖಾನ್ (85) ಇಸ್ಲಾಮಾಬಾದ್‌ನಲ್ಲಿ ಭಾನುವಾರ ನಿಧನರಾದರು.

ಎ.ಕ್ಯೂ.ಖಾನ್ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಭಾನುವಾರ ಮುಂಜಾನೆ ಕೊನೆಯುಸಿರೆಳೆದರು ಎಂದು ‘ರೇಡಿಯೋ ಪಾಕಿಸ್ತಾನ’ದ ಮಾಹಿತಿ ಉಲ್ಲೇಖಿಸಿ ಸುದ್ದಿ ಮಾಧ್ಯಮ ‘ದಿ ಡಾನ್‌’ ವರದಿ ಮಾಡಿದೆ.

1936ರಲ್ಲಿ ಭಾರತದ ಭೋಪಾಲ್‌ನಲ್ಲಿ ಜನಿಸಿದ ಎ.ಕ್ಯೂ.ಖಾನ್, ವಿಭಜನೆಯ ನಂತರ 1947ರಲ್ಲಿ ತಮ್ಮ ಕುಟುಂಬದೊಂದಿಗೆ ಪಾಕಿಸ್ತಾನಕ್ಕೆ ವಲಸೆ ಬಂದಿದ್ದರು.

ಎ.ಕ್ಯೂ.ಖಾನ್ ಕೋವಿಡ್-19 ಹಿನ್ನೆಲೆಯಲ್ಲಿ ಆಗಸ್ಟ್ 26 ರಂದು ‘ಖಾನ್ ರಿಸರ್ಚ್ ಲ್ಯಾಬೋರೇಟರೀಸ್ ಆಸ್ಪತ್ರೆ’ಗೆ ದಾಖಲಾಗಿದ್ದರು. ನಂತರ, ಅವರನ್ನು ರಾವಲ್ಪಿಂಡಿಯ ಮಿಲಿಟರಿ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಆಸ್ಪತ್ರೆಯಲ್ಲಿದ್ದ ಅವಧಿಯಲ್ಲಿ ಪ್ರಧಾನಿಯಾಗಲಿ ಅವರ ಸಂಪುಟ ಸಹೋದ್ಯೋಗಿಗಳಾಗಲಿ ತಮ್ಮ ಆರೋಗ್ಯ ವಿಚಾರಿಸಲಿಲ್ಲ ಎಂದು ಖಾನ್‌ ಕಳೆದ ತಿಂಗಳು ಆರೋಪಿಸಿದ್ದರು.

ಪಾಕಿಸ್ತಾನದ ಅಣ್ವಸ್ತ್ರ ಪ್ರಸರಣದಲ್ಲಿನ ತಮ್ಮ ಪಾತ್ರದ ಕುರಿತು ಖಾನ್‌ 2004ರಲ್ಲಿ ಬಹಿರಂಗವಾಗಿಯೇ ಘೋಷಿಸಿಕೊಂಡಿದ್ದರು. ಖಾನ್‌ ಅವರನ್ನು ಪಾಕಿಸ್ತಾನದ ಅಣ್ವಸ್ತ್ರ ಯೋಜನೆ ಪಿತಾಮಹ ಎಂದು ಕರೆಯಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT