ವಾಷಿಂಗ್ಟನ್: ಅಮೆರಿಕದ ಫೆಡರಲ್ ರಿಸರ್ವ್ ಗವರ್ನರ್ ಲೀಸಾ ಕುಕ್ ಅವರನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ವಜಾಗೊಳಿಸಿದ್ದಾರೆ.

ರಾಜಕೀಯದಿಂದ ದೂರವಿದ್ದು, ಸ್ವತಂತ್ರ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದೇ ಪರಿಗಣಿಸಲಾಗುತ್ತಿದ್ದ ಫೆಡರಲ್ ರಿಸರ್ವ್ ಮೇಲೆ ತಮ್ಮ ಹಿಡಿತ ಸಾಧಿಸುವ ಉದ್ದೇಶದಿಂದ ಟ್ರಂಪ್ ಅವರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ‘ಟ್ರುತ್ ಸೋಷಿಯಲ್’ನಲ್ಲಿ ಪತ್ರವೊಂದನ್ನು ಪೋಸ್ಟ್ ಮಾಡಿರುವ ಟ್ರಂಪ್, ‘ಹಣಕಾಸು ವ್ಯವಹಾರದಲ್ಲಿ ವಂಚನೆ ಮಾಡಿರುವ ಆರೋಪಗಳನ್ನು ಎದುರಿಸುತ್ತಿರುವ ಕಾರಣ ಕುಕ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ’ ಎಂದು ಹೇಳಿದ್ದಾರೆ.

‘ಟ್ರಂಪ್ ಅವರು ರಾಜೀನಾಮೆ ನೀಡುವಂತೆ ಸೂಚಿಸಿದರೂ, ನಾನು ಈ ಹುದ್ದೆಯಿಂದ ಕೆಳಗಿಳಿಯುವುದಿಲ್ಲ’ ಎಂಬುದಾಗಿ ಕುಕ್ ಕೆಲ ದಿನಗಳ ಹಿಂದಷ್ಟೆ ಹೇಳಿದ್ದರು. ಇದರ ಬೆನ್ನಲ್ಲೇ ಟ್ರಂಪ್ ಈ ಕ್ರಮ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.