ಪೋರ್ಟ್ ಮೊರೆಸ್ಬಿ: ಪಪುವಾ ನ್ಯೂಗಿನಿಯ ಪ್ರವಾಹ ಪೀಡಿತ ಉತ್ತರ ಭಾಗದಲ್ಲಿ ಸಂಭವಿಸಿದ 6.9 ತೀವ್ರತೆಯ ಭೂಕಂಪದಿಂದಾಗಿ ಸುಮಾರು 1,000 ಮನೆಗಳು ನಾಶವಾಗಿವೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಸಂಭವಿಸಿದ ಭೂಕಂಪವು ಈ ಪ್ರದೇಶದ ಬಹುಭಾಗದಲ್ಲಿ ಹಾನಿಯುಂಟುಮಾಡಿದೆ. ಈವರೆಗೆ ಅಂದಾಜು 1,000 ಮನೆಗಳು ನಾಶವಾಗಿವೆ. ತುರ್ತು ಕಾರ್ಯಾಚರಣೆ ಸಿಬ್ಬಂದಿ, ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ಈಸ್ಟ್ ಸೆಪಿಕ್ ಗವರ್ನರ್ ಅಲನ್ ಬರ್ಡ್ ತಿಳಿಸಿದ್ದಾರೆ.

ಮೂವರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಅಂಬುಂಟಿ ಪಟ್ಟಣದ ಈಶಾನ್ಯಕ್ಕೆ ಸುಮಾರು 32 ಕಿ.ಮೀ ದೂರದಲ್ಲಿ ಹಾಗೂ 35 ಆಳದಲ್ಲಿ ಭೂಕಂಪವಾಗಿದೆ ಎಂದು ಅಂದಾಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.