ನಿಯಾಮೆ (ನೈಗರ್): ಪಶ್ಚಿಮ ಆಫ್ರಿಕಾದ ನೈಗರ್ ದೇಶದ ರಾಜಧಾನಿ ನಿಯಾಮೆ ಸಮೀಪದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 58 ಜನರು ಮೃತಪಟ್ಟಿದ್ದಾರೆ.

ಮಾಲಿಯ ಗಡಿಯಲ್ಲಿ ಈ ದಾಳಿ ನಡೆದಿದೆ. ಸರ್ಕಾರಿ ಬಸ್ ಅನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ ಎಂದು ನೈಗರ್ ಸರ್ಕಾರಪ್ರಕಟಣೆಯಲ್ಲಿ ತಿಳಿಸಿದೆ.

ಬ್ಯಾನಿಬಂಗಸ್ ಪಟ್ಟಣಕ್ಕೆ ಹೊಂದಿಕೊಂಡಿರುವ ಚಿನೆಡೋಗರ್ ಹಳ್ಳಿಯ ಸಮೀಪದಲ್ಲಿ ಈ ದಾಳಿ ನಡೆದಿದೆ. ನಾಲ್ಕು ವಾಹನಗಳಲ್ಲಿ ಬಂದಿದ್ದ ಉಗ್ರರು ಬಸ್ ಅನ್ನು ಅಡ್ಡಗಟ್ಟಿ ಬಾಂಬ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 58 ಜನರು ಮೃತಪಟ್ಟಿದ್ದಾರೆ ಎಂದು ನೈಗರ್ ಪೊಲೀಸರು ತಿಳಿಸಿದ್ದಾರೆ.

ಉಗ್ರರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಕೈಗೊಂಡಿದ್ದಾರೆ. ಈವರೆಗೂ ಯಾವುದೇ ಉಗ್ರಗಾಮಿ ಸಂಘಟನೆ ಹೊಣೆ ಹೊತ್ತುಕೊಂಡಿಲ್ಲ.

ನೈಗರ್ ದೇಶದಲ್ಲಿ ಕಳೆದೊಂದು ದಶಕದಿಂದ ಎರಡು ಜಿಹಾದಿ ಉಗ್ರ ಸಂಘಟನೆಗಳು ಸಕ್ರಿಯವಾಗಿದ್ದು ಈ ಕೃತ್ಯವನ್ನು ಇವೇ ಸಂಘಟನೆಗಳು ಎಸಗಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.