ಢಾಕಾ: ‘ಇನ್ಕ್ವಿಲಾಬ್ ಮಂಚ್’ ಸಂಘಟನೆಯ ನಾಯಕ ಶರೀಫ್ ಉಸ್ಮಾನ್ ಹಾದಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜನವರಿ 7ರಂದು ಅಂತಿಮ ಚಾರ್ಜ್ಶೀಟ್ ಸಲ್ಲಿಸಲಾಗುವುದು ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ತಿಳಿಸಿದೆ. ತನ್ನ ಅವಧಿಯಲ್ಲಿಯೇ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದೆ.

ಸಂಸತ್ತಿನಲ್ಲಿ ಸಚಿವಾಲಯದ ಸಭೆ ನಡೆಸಿ ಮಾತನಾಡಿದ ಗೃಹ ಇಲಾಖೆಯ ಸಲಹೆಗಾರ ಜಹಾಂಗೀರ್ ಆಲಂ ಚೌಧರಿ, ‘ಹಾದಿ ಪ್ರಕರಣವನ್ನು ಅತ್ಯಂತ ಮಹತ್ವದ್ದಾಗಿ ಪರಿಗಣಿಸಿದೆ’ ಎಂದು ಅವರು ತಿಳಿಸಿದರು.

ಫೆಬ್ರುವರಿ 12ರಂದು ಬಾಂಗ್ಲಾದೇಶ ಸಂಸತ್ತಿಗೆ ಚುನಾವಣೆ ನಡೆಯಲಿದೆ.

ಡಿಸೆಂಬರ್ 12ರಂದು ಢಾಕಾದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಹಾದಿ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ತೀವ್ರ ಗಾಯಗೊಂಡಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಸಿಂಗಾಪುರಕ್ಕೆ ಕಳುಹಿಸಿಕೊಡಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಡಿಸೆಂಬರ್ 18ರಂದು ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.