ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವದ ಮೊದಲ ಚಿಕೂನ್‌ಗುನ್ಯಾ ಲಸಿಕೆಗೆ ಅಮೆರಿಕದ ಎಫ್‌ಡಿಎ ಅನುಮೋದನೆ

Published 10 ನವೆಂಬರ್ 2023, 23:30 IST
Last Updated 10 ನವೆಂಬರ್ 2023, 23:30 IST
ಅಕ್ಷರ ಗಾತ್ರ

ನವದೆಹಲಿ: ವಿಶ್ವದ ಮೊದಲ ಚಿಕೂನ್‌ಗುನ್ಯಾ ಲಸಿಕೆ ‘ಇಕ್ಸ್‌ಚಿಕ್‌'ಗೆ ಅಮೆರಿಕದ ಆಹಾರ ಮತ್ತು ಔಷಧ ಆಡಳಿತವು (ಎಫ್‌ಡಿಎ) ಅನುಮೋದನೆ ನೀಡಿದೆ.

18 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರಿಗೆ ಹಾಗೂ ಸೊಳ್ಳೆಯಿಂದ ಹರಡುವ ಈ ರೋಗದಿಂದ ಬಳಲುತ್ತಿರುವವರಿಗೆ ಈ ಲಸಿಕೆಯನ್ನು ನೀಡಲು ಅನುಮೋದನೆ ನೀಡಲಾಗಿದೆ. ಈ ಲಸಿಕೆಯ ಒಂದೇ ಡೋಸ್‌ ನೀಡಲಾಗುವುದು ಎಂದು ಎಫ್‌ಡಿಎ ಹೇಳಿದೆ.

ಆಸ್ಟ್ರೀಯಾದ ವಿಯೆನ್ನಾದಲ್ಲಿರುವ ‘ವಾಲ್ನೇವಾ’ ಕಂಪನಿಯು ಈ ಲಸಿಕೆಯನ್ನು ತಯಾರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT