ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೈವಾನ್‌ನಲ್ಲಿ ಮೊದಲ ಸಲಿಂಗ ವಿವಾಹ

Last Updated 25 ಮೇ 2019, 1:32 IST
ಅಕ್ಷರ ಗಾತ್ರ

ತೈಪೆ: ತೈವಾನ್‌ನಲ್ಲಿ ಮೊದಲ ಅಧಿಕೃತ ಸಲಿಂಗ ವಿವಾಹ ಶುಕ್ರವಾರ ನೆರವೇರಿತು.

ಪುರುಷ ಸಲಿಂಗ ಜೋಡಿಗಳಾದ ಶೇನ್‌ ಲಿನ್‌ ಮತ್ತು ಮಾರ್ಕ್‌ ಯುವಾನ್ ಮದುವೆಯಾದರು. ಈ ಮೂಲಕ ಏಷ್ಯಾದಲ್ಲಿ ಲೈಂಗಿಕ ಅಲ್ಪಸಂಖ್ಯಾತರು (ಎಲ್‌ಜಿಬಿಟಿ) ನಡೆಸುತ್ತಿದ್ದ ಮೂರು ದಶಕಗಳ ಹೋರಾಟಕ್ಕೆ ಜಯ ಸಂದಿದೆ.

ಕಾಲೇಜು ದಿನಗಳಿಂದಲೂ ಪರಸ್ಪರ ಪ್ರೀತಿಸುತ್ತಿದ್ದ ಶೇನ್‌ ಲಿನ್‌ ಮತ್ತು ಮಾರ್ಕ್‌ ಯೋನ್‌ ಅವರುಇಲ್ಲಿನ ಸರ್ಕಾರಿ ಕಚೇರಿಯಲ್ಲಿ ವಿವಾಹ ನೋಂದಣಿ ಮಾಡಿಸಿಕೊಂಡಿದ್ದಾರೆ.

ಕಳೆದ ವಾರ ತೈವಾನ್‌, ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಿತ್ತು. ಇಂತಹ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಿದ ಏಷ್ಯಾದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ಸಲಿಂಗ ವಿವಾಹಕ್ಕೆ ಅವಕಾಶ ನೀಡುವ ಮಸೂದೆಯ ಪರ ಹಾಗೂ ವಿರೋಧ ಹೋರಾಟಗಳು ಇಲ್ಲಿ ನಡೆದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT