ಜಕಾರ್ತ: ಇಂಡೋನೇಷ್ಯಾದ ದಕ್ಷಿಣ ಸುಲವೇಸಿ ಪ್ರಾಂತ್ಯದಲ್ಲಿ ಸಂಭವಿಸಿದ ಪ್ರವಾಹದಲ್ಲಿ 16 ಜನರು ಸಾವನ್ನಪ್ಪಿದ್ದು,23 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಕಾಣೆಯಾಗಿರುವ 23 ಮಂದಿಗಾಗಿ ಶೋಧ ಕಾರ್ಯಚರಣೆ ಮುಂದುವರಿದಿದೆ. ಭಾರಿ ಮಳೆಯಿಂದಾಗಿ ಹಲವೆಡೆ ಭೂ ಕುಸಿತ ಸಂಭವಿಸಿದೆ ಎಂದು ಅಲ್ಲಿನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯ ವಕ್ತಾರರು ತಿಳಿಸಿದರು.
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮೂರು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದರಿಂದಾಗಿ ಆ ಪ್ರಾಂತ್ಯದಲ್ಲಿ ಪ್ರವಾಹ ಎದುರಾಗಿದೆ ಎಂದು ಉತ್ತರ ಲುವು ಜಿಲ್ಲೆಯ ಅಧಿಕಾರಿಯೊಬ್ಬರು ಹೇಳಿದರು.