ಲಂಡನ್: ವಿದೇಶಿ ಬ್ಯಾಂಕ್ಗಳಿಗೆ ಅಭಿವೃದ್ಧಿಯ ಆಕರ್ಷಕ ಅವಕಾಶಗಳನ್ನು ಭಾರತ ಕಲ್ಪಿಸುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬ್ರಿಟನ್ನ ಹೂಡಿಕೆದಾರರನ್ನು ಉದ್ದೇಶಿಸಿ ಹೇಳಿದರು.

ಭಾರತ–ಬ್ರಿಟನ್ ಹೂಡಿಕೆದಾರರ ಸಭೆಯ ಅಧ್ಯಕ್ಷತೆ ವಹಿಸಿ ಮಂಗಳವಾರ ಸಂಜೆ ಅವರು ಮಾತನಾಡಿದರು.

ಮಧ್ಯಮವರ್ಗದವರ ಸಂಖ್ಯೆ ಭಾರತದಲ್ಲಿ ಹೆಚ್ಚುತ್ತಿದ್ದು, ಸುಸ್ಥಿರ ಆರ್ಥಿಕ ಅಭಿವೃದ್ಧಿಗೆ ಸೂಕ್ತ ವಾತಾವರಣ ಸೃಷ್ಟಿಯಾಗುತ್ತಿದೆ. ಹೂಡಿಕೆಯನ್ನು ಪ್ರೋತ್ಸಾಹಿಸುವಂತಹ ನಿಯಮಗಳು ನವ ಭಾರತ ನಿರ್ಮಾಣಕ್ಕೆ ಪೂರಕವಾಗಿವೆ ಎಂದು ಹೇಳಿದರು.

2032ರ ಹೊತ್ತಿಗೆ ಭಾರತವು ವಿಶ್ವದ ಆರನೇ ಅತಿ ದೊಡ್ಡ ವಿಮಾ ಮಾರುಕಟ್ಟೆಯಾಗಿ ಬೆಳೆಯಲಿದೆ. 2024–28ರ ಅವಧಿಯಲ್ಲಿ ಈ ಕ್ಷೇತ್ರದ ಸಂಯುಕ್ತ ವಾರ್ಷಿಕ ಬೆಳವಣಿಗೆ ದರದ (ಸಿಎಜಿಆರ್) ಸರಾಸರಿಯು 7.1ರಷ್ಟು ಇರಲಿದೆ. ಜಿ20 ರಾಷ್ಟ್ರಗಳಲ್ಲಿ ವಿಮಾ ಕ್ಷೇತ್ರದಲ್ಲಿ ಭಾರತ ದಾಪುಗಾಲು ಇಡುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.