ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆನಡಾದಿಂದ ಅಕ್ರಮವಾಗಿ ಅಮೆರಿಕ ಪ್ರವೇಶ ಯತ್ನ:ಮೂವರು ಭಾರತೀಯರು ಸೇರಿ ನಾಲ್ವರ ಸೆರೆ

Published 14 ಮಾರ್ಚ್ 2024, 4:18 IST
Last Updated 14 ಮಾರ್ಚ್ 2024, 4:18 IST
ಅಕ್ಷರ ಗಾತ್ರ

ವಾಷಿಂಗ್ಟನ್: ಅಕ್ರಮವಾಗಿ ಕೆನಡಾದಿಂದ ಅಮೆರಿಕ ಪ್ರವೇಶಿಸಲು ಯತ್ನಿಸುತ್ತಿದ್ದ ಮೂವರು ಭಾರತೀಯರು ಸೇರಿದಂತೆ 4 ಮಂದಿಯನ್ನು ನ್ಯೂಯಾರ್ಕ್ ಗಡಿಯಲ್ಲಿ ಬಂಧಿಸಲಾಗಿದೆ.

ಬಫೆಲೊ ನಗರದ ಬಳಿ ಚಲಿಸುತ್ತಿದ್ದ ರೈಲಿನಿಂದ ಅಂತರರಾಷ್ಟ್ರೀಯ ಗಡಿಗೆ ಧುಮುಕಿದ ಒಬ್ಬರು ಮಹಿಳೆ ಸೇರಿ ನಾಲ್ವರನ್ನು ಅಮೆರಿಕ ಗಡಿ ಭದ್ರತಾ ಪಡೆ ಬಂಧಿಸಿದೆ. ಒಬ್ಬ ವ್ಯಕ್ತಿ ಡೊಮಿನಿಕ್ ರಿಪಬ್ಲಿಕ್‌ ಮೂಲದವನು ಎಂದು ಗೊತ್ತಾಗಿದೆ.

ಗಾಯಗೊಂಡಿದ್ದ ಮಹಿಳೆ ನಡೆಯಲು ಸಾಧ್ಯವಾಗದ್ದರಿಂದ ಆಕೆಯನ್ನು ಅಲ್ಲಿಗೆ ಬಿಟ್ಟು ತೆರಳಾಗಿತ್ತು. ಪೊಲಿಸರು ಆಕೆಯನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ವಲ್ಪ ಸಮಯದಲ್ಲೇ ಉಳಿದ ಮೂವರನ್ನೂ ಬಂಧಿಸಲಾಗಿದೆ.

ಮಹಿಳೆಗೆ ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಚಾರಣೆ ವೇಳೆ ಈ ನಾಲ್ವರೂ ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸಿದ್ದು ದೃಢಪಟ್ಟಿದೆ.

ಉಳಿದ ಮೂವರನ್ನು ವಲಸೆ ಮತ್ತು ರಾಷ್ಟ್ರೀಯತೆ ಕಾಯ್ದೆಯ ಸೆಕ್ಷನ್ 212 ಹಾಗೂ 237ರಡಿ ಗಡೀಪಾರು ಮಾಡಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT