ವಾಷಿಂಗ್ಟನ್: ಪನಾಮದ ಸೇತುವೆಯ ಬಳಿ ಇಂಧನ ಟ್ಯಾಂಕರ್ಗಳು ಸ್ಫೋಟಗೊಂಡ ಪರಿಣಾಮ ಓರ್ವ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪನಾಮ ನಗರದ ಪಶ್ಚಿಮ ಭಾಗದಲ್ಲಿರುವ ಬಾಲ್ಬೋವಾದ ಲಾ ಬೊಕಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಏಕಾಏಕಿ ಇಂಧನ ಟ್ಯಾಂಕರ್ ಸ್ಫೋಟಗೊಂಡಿರುವ ಭಯಾನಕ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಮೂರು ಇಂಧನ ಟ್ಯಾಂಕರ್ಗಳಿಗೆ ಬೆಂಕಿ ತಗುಲಿ ಸ್ಫೋಟಗೊಂಡಿದೆ ಎಂದು ಅಗ್ನಿಶಾಮಕ ದಳದ ಮುಖ್ಯಸ್ಥ ವಿಕ್ಟರ್ ಅಲ್ವಾರೆಜ್ ತಿಳಿಸಿದ್ದಾರೆ.

ಸೇತುವೆ ಪಕ್ಕದಲ್ಲಿ ಸಂಚರಿಸುತ್ತಿದ್ದ ವಾಹನಗಳಿಗೂ ಹಾನಿಯುಂಟಾಗಿದೆ. ಸದ್ಯ 1,654 ಮೀಟರ್ ಉದ್ದದ ಪ್ರಮುಖ ರಸ್ತೆಯಾದ ಬ್ರಿಡ್ಜ್ ಆಫ್ ದಿ ಅಮೆರಿಕಾಸ್ ಅನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.