ವಾಷಿಂಗ್ಟನ್: ನವದೆಹಲಿಯಲ್ಲಿ ನಡೆಯಲಿರುವ ಜಿ-20 ನಾಯಕರ ಶೃಂಗಸಭೆಯಲ್ಲಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಪಾಲ್ಗೊಳ್ಳಲಿದ್ದಾರೆ ಎಂದು ಶ್ವೇತಭವನವು ತಿಳಿಸಿದೆ.
ಸೆಪ್ಟೆಂಬರ್ 7ರಂದು ಬೈಡನ್ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 8ರಂದು ಭಾರತ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.
ಭಾರತ-ಅಮೆರಿಕ ಮೈತ್ರಿ ರಾಷ್ಟ್ರಗಳಾಗಿದ್ದು, ಮೋದಿ-ಬೈಡನ್ ಮಾತುಕತೆಯ ಮೂಲಕ ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಬಾಂಧವ್ಯ ಮತ್ತಷ್ಟು ವೃದ್ಧಿ ಗುರಿ ಇರಿಸಿಕೊಳ್ಳಲಾಗಿದೆ.
ಜಿ20 ಶೃಂಗಸಭೆ ಸೆಪ್ಟೆಂಬರ್ 9 ಹಾಗೂ 10ರಂದು ನವದೆಹಲಿಯಲ್ಲಿ ನಡೆಯಲಿದೆ.