ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

G7 ರಾಷ್ಟ್ರಗಳ ಸಭೆ: ಕಲ್ಲಿದ್ದಲಿನಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲು ಚರ್ಚೆ

Published 29 ಏಪ್ರಿಲ್ 2024, 14:29 IST
Last Updated 29 ಏಪ್ರಿಲ್ 2024, 14:29 IST
ಅಕ್ಷರ ಗಾತ್ರ

ಟುರಿನ್‌: 2035ರ ವೇಳೆಗೆ ಕಲ್ಲಿದ್ದಲು ಆಧಾರಿತ ವಿದ್ಯುತ್‌ ಉತ್ಪಾದನೆ ಸ್ಥಗಿತಗೊಳಿಸುವ ಬಗ್ಗೆ ಜಿ7 ಸದಸ್ಯ ರಾಷ್ಟ್ರಗಳ ಇಂಧನ ಸಚಿವರು ಇಟಲಿಯಲ್ಲಿ ನಡೆಸಿದ ಸಭೆಯಲ್ಲಿ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಕಳೆದ ವರ್ಷ ದುಬೈನಲ್ಲಿ ನಡೆದ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಕುರಿತ ಸಮಾವೇಶದಲ್ಲಿ (ಸಿಒಪಿ28) ಕಲ್ಲಿದ್ದಲು ಮಾಲಿನ್ಯಕಾರಕ ಎಂದು ನಿರ್ಧರಿಸಿದ ಹಿನ್ನೆಲೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು ಎಂದು ಗೊತ್ತಾಗಿದೆ.

‘ಜಿ7 ಸದಸ್ಯ ರಾಷ್ಟ್ರಗಳಾದ ಇಟಲಿ, ಅಮೆರಿಕ, ಬ್ರಿಟನ್‌, ಫ್ರಾನ್ಸ್, ಜರ್ಮನಿ, ಕೆನಡಾ ಮತ್ತು ಜಪಾನ್‌ನ ರಾಜತಾಂತ್ರಿಕ ಅಧಿಕಾರಿಗಳು ಈ ಬಗ್ಗೆ ಚರ್ಚೆ ನಡೆಸಿದರು. ಆದರೆ, ಒಂದು ರಾಷ್ಟ್ರ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿತು’ ಎಂದು ಮೂಲಗಳು ತಿಳಿಸಿವೆ.

ಟುರಿನ್‌ನಲ್ಲಿ ಸೋಮವಾರ ಜಮಾಯಿಸಿದ್ದ ಕೆಲವರು, ಜಿ7 ನಾಯಕರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ, ‘ಇವರು ಹವಾಮಾನ ವೈಪರಿತ್ಯದ ವಿರುದ್ಧ ಹೋರಾಡುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT