ಟೆಲ್ ಅವಿವ್: ಯುದ್ಧವನ್ನು ಕೊನೆಗೊಳಿಸಲು ಅಮೆರಿಕದ ಹೊಸ ಯೋಜನೆಯ ಕುರಿತು ಈಜಿಪ್ಟ್ನಲ್ಲಿ ಹಮಾಸ್ ಜೊತೆ ಪರೋಕ್ಷ ಮಾತುಕತೆಗಳು ಮುಂದುವರಿಯುತ್ತಿದ್ದಂತೆ, ಮುಂದಿನ ದಿನಗಳಲ್ಲಿ ಗಾಜಾದಿಂದ ಎಲ್ಲಾ ಒತ್ತೆಯಾಳುಗಳ ಬಿಡುಗಡೆಯನ್ನು ಘೋಷಿಸುವ ಭರವಸೆಯನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವ್ಯಕ್ತಪಡಿಸಿದ್ದಾರೆ.

ತಾಂತ್ರಿಕ ವಿವರಗಳನ್ನು ಅಂತಿಮಗೊಳಿಸಲು ಈಜಿಪ್ಟ್ಗೆ ನಿಯೋಗವನ್ನು ಕಳುಹಿಸಿದ್ದೇನೆ ಎಂದು ಶನಿವಾರ ತಡರಾತ್ರಿ ನೆತನ್ಯಾಹು ಒಂದು ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಮಾತುಕತೆಗಳನ್ನು ಕೆಲವು ದಿನಗಳ ಕಾಲಮಿತಿಗೆ ಸೀಮಿತಗೊಳಿಸುವುದು ನಮ್ಮ ಗುರಿಯಾಗಿದೆ ಎಂದೂ ತಿಳಿಸಿದ್ದಾರೆ.

ಅಮೆರಿಕ ಯೋಜನೆಯ ಕೆಲವು ಅಂಶಗಳನ್ನು ಹಮಾಸ್ ಒಪ್ಪಿಕೊಂಡಿದೆ ಎಂದಿದ್ದಾರೆ. ಇದೇವೇಳೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಮಾಸ್ ಹೇಳಿಕೆಯನ್ನು ಸ್ವಾಗತಿಸಿದ್ದು, ಹಮಾಸ್ ತ್ವರಿತವಾಗಿ ನಿರ್ಧಾರ ಪ್ರಕಟಿಸಬೇಕು.. ಇಲ್ಲವಾದರೆ ನರಕ ನೋಡಬೇಕಾಗುತ್ತದೆ ಎಂದೂ ಎಚ್ಚರಿಸಿದ್ದರು.

ಗಾಜಾದಲ್ಲಿ ಯುದ್ಧ ಕೊನೆಗೊಳಿಸಲು ಮತ್ತು ಉಳಿದ ಒತ್ತೆಯಾಳುಗಳ ಬಿಡುಗಡೆಗೆ ಸಂಬಂಧಿಸಿದಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಸ್ತಾಪಿಸಿರುವ ಶಾಂತಿ ಯೋಜನೆಯ ಕೆಲವು ಅಂಶಗಳನ್ನು ಒಪ್ಪಿಕೊಳ್ಳುತ್ತೇವೆ' ಎಂದು ಹಮಾಸ್ ತಿಳಿಸಿದೆ. ಆದರೆ, ಇತರ ವಿಷಯಗಳಿಗೆ ಸಂಬಂಧಿಸಿದಂತೆ ಇನ್ನಷ್ಟು ಮಾತುಕತೆ ನಡೆಸಬೇಕಿದೆ ಎಂದೂ ಅದು ಶನಿವಾರ ಹೇಳಿತ್ತು.

ಹಮಾಸ್ ಹೇಳಿಕೆ ಹೊರಬಿದ್ದ ಬೆನ್ನಲ್ಲೇ, ಟ್ರಂಪ್ ಅವರ ಯೋಜನೆಯ ಮೊದಲ ಹಂತದ ಅನುಷ್ಠಾನಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿರುವುದಾಗಿ ಇಸ್ರೇಲ್ ಸೇನೆ ಶನಿವಾರ ಮಾಹಿತಿ ನೀಡಿದೆ.

‘ಇಸ್ರೇಲ್ನ ನಾಯಕರು ಯೋಜನೆ ಅನುಷ್ಠಾನಕ್ಕೆ ಸಿದ್ಧತಾ ಕಾರ್ಯವನ್ನು ಮುಂದುವರಿಸಲು ಸೂಚಿಸಿದ್ದಾರೆ’ ಎಂದು ಸೇನೆಯ ಹಿರಿಯ

ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಮುಂದುವರಿದ ಕಾರ್ಯಾಚರಣೆ: ಗಾಜಾ ಮೇಲೆ ದಾಳಿ ನಡೆಸದಂತೆ ಟ್ರಂಪ್ ಅವರು ಇಸ್ರೇಲ್ಗೆ ಸೂಚಿಸಿದ ಬಳಿಕವೂ, ಇಸ್ರೇಲ್ ಪಡೆಗಳು ಗಾಜಾಪಟ್ಟಿಯಲ್ಲಿ ಶನಿವಾರ ಕಾರ್ಯಾಚರಣೆ ಮುಂದುವರಿಸಿವೆ. ಅಲ್ಲದೆ ನಿವಾಸಿಗಳಿಗೆ ಅಲ್ಲಿಂದ ತೆರಳದಂತೆ ಸೇನೆ ಎಚ್ಚರಿಕೆಯನ್ನೂ ನೀಡಿದೆ. ಇಸ್ರೇಲ್ ನಡೆಸಿದ ವೈಮಾನಿಕ ದಾಳಿ, ಬಾಂಬ್ ದಾಳಿಯಲ್ಲಿ 20ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ ಎಂದು ಮೂಲಗಳು ತಿಳಿಸಿವೆ.
.Gaza Deal | ಒಪ್ಪಂದಕ್ಕೆ ಬಾರದಿದ್ದರೆ ನರಕ ದರ್ಶನ: ಹಮಾಸ್ಗೆ ಟ್ರಂಪ್ ಎಚ್ಚರಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.