ದೀರ್ ಅಲ್–ಬಲಾಹ್ (ಗಾಜಾ ಪಟ್ಟಿ): ಶುಕ್ರವಾರ ತಡರಾತ್ರಿಯಿಡೀ ಇಸ್ರೇಲ್ ಸೇನೆ ನಡೆಸಿದ ವೈಮಾನಿಕ ಹಾಗೂ ಗುಂಡಿನ ದಾಳಿಯಿಂದ ಕನಿಷ್ಠ 25 ಮಂದಿ ಮೃತಪಟ್ಟಿದ್ದಾರೆ ಎಂದು ಇಲ್ಲಿನ ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಗಾಜಾದಲ್ಲಿ ತೀವ್ರ ಕ್ಷಾಮ ಎದುರಾಗಿದ್ದು, ಎರಡು ರಾಷ್ಟ್ರಗಳ ನಡುವಿನ ಕದನ ವಿರಾಮ ಮಾತುಕತೆಯೂ ಸ್ಥಗಿತಗೊಂಡಿದೆ.

ಇಸ್ರೇಲ್ ಹೊಂದಿಕೊಂಡಿರುವ ಝಿಕಿಮ್ ಭಾಗದಲ್ಲಿ ಆಹಾರ ಸಾಮಗ್ರಿಗಳನ್ನು ಹೊತ್ತು ತಂದಿದ್ದ ನೆರವಿನ ಟ್ರಕ್ಗಾಗಿ ಕಾಯುತ್ತಿದ್ದ ವೇಳೆ ಗುಂಡಿನ ದಾಳಿ ನಡೆದಿದ್ದರಿಂದ ದೊಡ್ಡ ಸಂಖ್ಯೆಯಲ್ಲಿ ಜನರು ಮೃತಪಟ್ಟಿದ್ದಾರೆ ಎಂದು ಶಿಫಾ ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದಾರೆ. ಎಲ್ಲರ ದೇಹಗಳನ್ನು ಇಲ್ಲಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಇತ್ತೀಚಿಗೆ ನಡೆಸಿದ ಗುಂಡಿನ ದಾಳಿ ಕುರಿತು ಇಸ್ರೇಲ್ ಸೇನೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗಾಜಾ ನಗರದ ಅಪಾರ್ಟ್ಮೆಂಟ್ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.