ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇಸ್ರೇಲ್ ದಾಳಿ: ಗಾಜಾದಲ್ಲಿ ವಿಶ್ವಸಂಸ್ಥೆಯ 6 ಅಧಿಕಾರಿಗಳ ಸಾವು

Published : 12 ಸೆಪ್ಟೆಂಬರ್ 2024, 6:16 IST
Last Updated : 12 ಸೆಪ್ಟೆಂಬರ್ 2024, 6:16 IST
ಫಾಲೋ ಮಾಡಿ
Comments

ಟೆಲ್ ಅವೀವ್: ಗಾಜಾದಲ್ಲಿ ಆಶ್ರಯ ತಾಣವಾಗಿ ಮಾರ್ಪಾಡಾಗಿದ್ದ ಶಾಲೆ ಮೇಲೆ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಮೃತಪಟ್ಟಿವರ ಪೈಕಿ ಪರಿಹಾರ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ವಿಶ್ವಸಂಸ್ಥೆಯ 6 ಅಧಿಕಾರಿಗಳೂ ಸೇರಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಆರು ಅಧಿಕಾರಿಗಳು ವಿಶ್ವಸಂಸ್ಥೆಯ ಪ್ಯಾಲೆಸ್ಟೀನ್ ನಿರಾಶ್ರಿತರಿಗಾಗಿ ಕೆಲಸ ಮಾಡುತ್ತಿದ್ದ ಪರಿಹಾರ ಏಜೆನ್ಸಿಯ ಸದಸ್ಯರಾಗಿದ್ದಾರೆ. ಪ್ಯಾಲೆಸ್ಟೀನ್ ನಿರಾಶ್ರಿತರಿಗೆ ಸಹಾಯ ಮಾಡುವ ಸಂಸ್ಥೆ ಇದಾಗಿದೆ.

ದಾಳಿಯಲ್ಲಿ ಕನಿಷ್ಠ 34 ಜನರು ಸಾವಿಗೀಡಾಗಿದ್ದಾರೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ವಿಶ್ವಸಂಸ್ಥೆ ತಿಳಿಸಿದೆ.

ಮೃತರಲ್ಲಿ ನಿರಾಶ್ರಿತರ ಆಶ್ರಯ ವ್ಯವಸ್ಥಾಪಕ ಮತ್ತು ಇತರ ತಂಡದ ಸದಸ್ಯರು ಸೇರಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಒಂದೇ ಘಟನೆಯಲ್ಲಿ ಸಂಭವಿಸಿದ ವಿಶ್ವಸಂಸ್ಥೆಯ ಅಧಿಕಾರಿಗಳ ಅಧಿಕ ಸಂಖ್ಯೆಯ ಸಾವು ಇದಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

ನುಸಿರಾತ್‌ನಲ್ಲಿರುವ ಶಾಲೆ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಇಸ್ರೇಲ್ ಎರಡು ವೈಮಾನಿಕ ದಾಳಿ ನಡೆಸಿದೆ.

ಗಾಜಾ ಪಟ್ಟಿಯ ಮಧ್ಯಭಾಗದ ನುಸಿರಾತ್‌ನಲ್ಲಿರುವ ಈ ಶಾಲೆಯು ಸುಮಾರು 12,000 ಸ್ಥಳಾಂತರಗೊಂಡ ನಿರಾಶ್ರಿತರಿಗೆ, ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳಿಗೆ ಆಶ್ರಯ ನೀಡುತ್ತಿದೆ. 11 ತಿಂಗಳ ಹಿಂದೆ ಸಂಘರ್ಷ ಪ್ರಾರಂಭವಾದಾಗಿನಿಂದ ಐದನೇ ಬಾರಿಗೆ ಶಾಲೆಯ ಮೇಲೆ ದಾಳಿ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT