ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆತ್ತಲೆಯಾಗಿ ಬಾಲಿ ದೇವಸ್ಥಾನ ಪ್ರವೇಶ ಮಾಡಿದ ಜರ್ಮನಿ ಯುವತಿ!

ಇಂಡೋನೇಷ್ಯಾದ ಬಾಲಿಯಲ್ಲಿ ಘಟನೆ
Published 27 ಮೇ 2023, 15:07 IST
Last Updated 27 ಮೇ 2023, 15:07 IST
ಅಕ್ಷರ ಗಾತ್ರ

ಬಾಲಿ: ಇಂಡೋನೇಷ್ಯಾದ ಬಾಲಿಯಲ್ಲಿ ಬೆತ್ತಲೆಯಾಗಿ ದೇವಸ್ಥಾನ ಪ್ರವೇಶ ಮಾಡಿದ್ದ 28 ವರ್ಷದ ಜರ್ಮನಿ ಮೂಲದ ಪ್ರವಾಸಿ ಯುವತಿಯುನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಿಯ ದೇವಸ್ಥಾನವೊಂದರಲ್ಲಿ ಸಾಂಪ್ರದಾಯಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಯುವತಿ ಸಂಪೂರ್ಣ ಬೆತ್ತಲೆಯಾಗಿ ವೇದಿಕೆ ಹತ್ತಿ ಹೋಗಿ ದೇವಸ್ಥಾನದ ಬಾಗಿಲನ್ನು ತೆರೆದಿದ್ದಾಳೆ. ಈ ವೇಳೆ ಜೋರಾಗಿ ದೇವರ ಎದುರು ಏನೋ ಕೂಗಿಕೊಂಡಿದ್ದಾಳೆ. ಮತ್ತೆ ವೇದಿಕೆಗೆ ಎದುರಾಗಿ ಬೆತ್ತಲೆಯಾಗಿ ಬಂದಿದ್ದಾಳೆ.

ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಾಲಿ ಪೊಲೀಸರು ಯುವತಿಯನ್ನು ಬಂಧಿಸಿ ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. ಬಳಿಕ ವೈದ್ಯರ ಸಲಹೆ ಮೇರೆಗೆ ಆ ಯುವತಿಯನ್ನು ಮಾನಸಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.

ಈ ಕುರಿತು ಎನ್‌ಡಿಟಿವಿ ವೆಬ್‌ಸೈಟ್ ವರದಿ ಮಾಡಿದೆ. ಇಂಡೋನೇಷ್ಯಾದಲ್ಲಿ ಪ್ರವಾಸಿಗರ ಅಸಭ್ಯ ವರ್ತನೆಗಳನ್ನು ತಡೆಗಟ್ಟಲು ಕಠಿಣ ಕಾನೂನುಗಳನ್ನು ಜಾರಿಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT