ಜಿನಿವಾ:ಜಾಗತಿಕವಾಗಿ ಈ ವರ್ಷ 'ಮಂಕಿಪಾಕ್ಸ್' ದೃಢಪಟ್ಟ50 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. ಆದಾಗ್ಯೂ ಈ ಸೋಂಕು ಹೆಚ್ಚಾಗಿ ಪತ್ತೆಯಾಗಿರುವ ಯುರೋಪ್‌ನಲ್ಲಿ ಹರಡುವಿಕೆ ಪ್ರಮಾಣ ಇಳಿಕೆಯಾಗುತ್ತಿದೆ ಎಂಬುದು ವಿಶ್ವ ಆರೋಗ್ಯ ಸಂಘಟನೆಯ (ಡಬ್ಲ್ಯುಎಚ್‌ಒ) ಅಂಕಿ ಅಂಶಗಳಿಂದ ತಿಳಿದು ಬಂದಿದೆ.

ಮಂಕಿಪಾಕ್ಸ್ ಅನ್ನುಡಬ್ಲ್ಯುಎಚ್‌ಒ ಜುಲೈನಲ್ಲಿ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಿಸಿತ್ತು. ಡಬ್ಲ್ಯುಎಚ್‌ಒ ಮಾಹಿತಿ ಪ್ರಕಾರ ಈ ವರ್ಷ ಪ್ರಪಂಚದಾದ್ಯಂತ ಒಟ್ಟು50,496 ಜನರಿಗೆಮಂಕಿಪಾಕ್ಸ್ ತಗುಲಿದ್ದು, 16 ಮಂದಿ ಮೃತಪಟ್ಟಿದ್ದಾರೆ.

'ಅರ್ಧಕ್ಕಿಂತ ಅಧಿಕ ಪ್ರಕರಣಗಳು ವರದಿಯಾಗಿರುವ ಅಮೆರಿಕದಲ್ಲಿ ಹಾಗೂ ಇತರ ಹಲವು ದೇಶಗಳಲ್ಲಿ ಹೊಸ ಪ್ರಕರಣಗಳು ವರದಿಯಾಗುತ್ತಲೇ ಇವೆ. ಆದಾಗ್ಯೂ, ಕೆನಡಾದಲ್ಲಿ ನಿರಂತರವಾಗಿ ಇಳಿಕೆಯಾಗುತ್ತಿರುವುದು ಉತ್ತೇಜನಕಾರಿಯಾಗಿದೆ' ಎಂದು ಡಬ್ಲ್ಯುಎಚ್‌ಒ ಮುಖ್ಯಸ್ಥಟೆಡ್ರೋಸ್ ಅಡಾನೊಮ್ ಗೆಬ್ರೆಯೆಸಸ್ ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

'ಜರ್ಮನಿ, ನೆದರ್‌ಲೆಂಡ್ ಸೇರಿದಂತೆ ಯುರೋಪಿನ ಕೆಲವು ದೇಶಗಳಲ್ಲಿ ಹೊಸ ಪ್ರಕರಣಗಳ ಪ್ರಮಾಣ ಏಕಾಏಕಿ ಕುಸಿದಿರುವುದು ಕಂಡುಬರುತ್ತಿದೆ. ಇದು ಸೋಂಕು ಪತ್ತೆ ಹಾಗೂ ಹರಡುವಿಕೆಯನ್ನು ನಿಯಂತ್ರಿಸಲು ಸಾರ್ವಜನಿಕ ಆರೋಗ್ಯ ಆಡಳಿತದ ಮಧ್ಯಸ್ಥಿಕೆ ಮತ್ತು ಸಮುದಾಯದ ಪಾಲ್ಗೊಳ್ಳುವಿಕೆಯ ಫಲ' ಎಂದುಅಭಿಪ್ರಾಯಪಟ್ಟಿದ್ದಾರೆ.

'ಸೂಕ್ತ ಕ್ರಮಗಳನ್ನು ಕೈಗೊಂಡರೆ, ಸೋಂಕು ಹರಡುವಿಕೆಯನ್ನು ತಡೆಯಬಹುದು ಎಂದು ನಾವು ಆರಂಭದಿಂದಲೂಹೇಳುತ್ತಿರುವುದನ್ನುಈ ಬೆಳವಣಿಗೆಯೂಖಚಿತಪಡಿಸುತ್ತಿದೆ' ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.