ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ರೆಜ್ನೊದಲ್ಲಿ ಸತ್ತಿದ್ದು ಬ್ರಾರ್ ಅಲ್ಲ: ಪೊಲೀಸರು

Published 2 ಮೇ 2024, 18:27 IST
Last Updated 2 ಮೇ 2024, 18:27 IST
ಅಕ್ಷರ ಗಾತ್ರ

ವಾಷಿಂಗ್ಟನ್ : ಫ್ರೆಜ್ನೊ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಬಲಿಯಾದ ವ್ಯಕ್ತಿಯು ಕೆನಡಾ ಮೂಲದ ಭಯೋತ್ಪಾದಕ ಸತಿಂದರ್‌ಜಿತ್ ಸಿಂಗ್ ಅಲಿಯಾಸ್ ಗೋಲ್ಡಿ ಬ್ರಾರ್ ಎಂಬ ವರದಿಗಳನ್ನು ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಪೊಲೀಸರು ಅಲ್ಲಗಳೆದಿದ್ದಾರೆ.

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆ ಪ್ರಕರಣದ ಪ್ರಮುಖ ಸಂಚುಕೋರ ಈ ಸತಿಂದರ್‌ಸಿಂಗ್ ಎಂಬ ಆರೋಪ ಇದೆ. ಗುಂಡಿನ ದಾಳಿಗೆ ಬಲಿಯಾದ ವ್ಯಕ್ತಿಯ ಹೆಸರು ಕ್ಸೇವಿಯರ್ ಗ್ಲಾಡ್ನಿ ಎಂದು ಪೊಲೀಸರು ಹೇಳಿದ್ದಾರೆ. 

ಗುಂಡಿನ ದಾಳಿಯಲ್ಲಿ ಬಲಿಯಾದ ವ್ಯಕ್ತಿಯೇ ಸಿಧು ಮೂಸೆವಾಲಾ ಅವರ ಹತ್ಯೆಯ ಪ್ರಮುಖ ಸಂಚುಕೋರ ಎಂದು ಭಾರತದ ಕೆಲವು ಮಾಧ್ಯಮಗಳಲ್ಲಿ ಊಹೆಗಳನ್ನು ಆಧರಿಸಿ ವರದಿಗಳು ಪ್ರಕಟವಾಗಿದ್ದವು. ಗುಂಡು ಹಾರಿಸಿದ್ದಾನೆ ಎನ್ನಲಾದ ವ್ಯಕ್ತಿಯು ಡಾರೆನ್ ವಿಲಿಯಮ್ಸ್ ಎಂದು ಗುರುತಿಸಲಾಗಿದೆ.

ಗ್ಯಾಂಗ್‌ ಸಂಬಂಧಿ ವೈಯಕ್ತಿಕ ಘರ್ಷಣೆಯ ಕಾರಣಕ್ಕೆ ಗುಂಡಿನ ದಾಳಿ ನಡೆದಿದೆ. ಸತಿಂದರ್‌ಜಿತ್‌ ಸಿಂಗ್ ಕೆನಡಾದ ಬ್ರಾಂಪ್ಟನ್‌ನಲ್ಲಿ ಇರುತ್ತಾನೆ ಎನ್ನಲಾಗಿದೆ. ಕೇಂದ್ರ ಸರ್ಕಾರವು ಈತನನ್ನು ಭಯೋತ್ಪಾದಕ ಎಂದು ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT