ಅಥೆನ್ಸ್: ಗ್ರೀಸ್‌ನಲ್ಲಿ ಕಾಡ್ಗಿಚ್ಚು ನಂದಿಸುತ್ತಿದ್ದ ಅಗ್ನಿಶಾಮಕ ವಿಮಾನ ಪತನವಾಗಿದ್ದು ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ.
ಎವಿಯಾ ದ್ವೀಪದಲ್ಲಿರುವ ಕಾಡಿನಲ್ಲಿ ಬೆಂಕಿ ನಂದಿಸುತ್ತಿದ್ದ ವಿಮಾನ ಮರಕ್ಕೆ ಡಿಕ್ಕಿ ಹೊಡೆದು ಸ್ವಲ್ಪ ದೂರ ತೆರಳಿ ಪತನವಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ.
ವಿಮಾನ ಪತನದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಿಡಿಯೊದಲ್ಲಿ ವಿಮಾನ ಪತನಗೊಳ್ಳುವ ಮೊದಲು ಮರಕ್ಕೆ ಡಿಕ್ಕಿ ಹೊಡೆದು ಮರ ಕತ್ತರಿಸಿ ಬೀಳುವುದನ್ನು ದೃಶ್ಯದಲ್ಲಿ ಕಾಣಬಹುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.