ಲಂಡನ್ : ಕೊರೊನಾ ಸೋಂಕಿನ ನಡುವೆ ಭಾರತದಲ್ಲಿ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸುತ್ತಿರುವ ಕ್ರಮವನ್ನು ಹವಾಮಾನ ಬದಲಾವಣೆ ವಿರುದ್ಧದ ಹೋರಾಟಗಾರ್ತಿಸ್ವೀಡಿಷ್‌ನ ಗ್ರೇಟಾ ಥನ್ಬರ್ಗ್ ವಿರೋಧಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಯದೃಷ್ಟಿಯಿಂದ ಇದು ಸರಿಯಾದ ಕ್ರಮವಲ್ಲ ಎಂದು ಹೇಳಿದ್ದಾರೆ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈ ಪರೀಕ್ಷೆಗಳನ್ನು ಮುಂದೂಡಬೇಕು ಎಂಬ ವಿದ್ಯಾರ್ಥಿಗಳ ಹಾಗೂ ಕೆಲವು ರಾಜಕೀಯ ನಾಯಕರ ಒತ್ತಾಯಕ್ಕೆ ಧ್ವನಿಗೂಡಿಸಿರುವ ಗ್ರೇಟಾ, ಸೋಂಕು ಹೆಚ್ಚಾಗುತ್ತಿರುವ ನಡುವೆ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಹಾಜರಾಗುವಂತೆ ಹೇಳುವುದು ಸರಿಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಸೇರಿದಂತೆ ಹಲವು ರಾಜಕೀಯ ನಾಯಕರು ಹಾಗೂ ವಿದ್ಯಾರ್ಥಿಗಳು ಈ ಪ್ರವೇಶ ಪರೀಕ್ಷೆಯನ್ನು ಮುಂದೂಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.