ಎಚ್–1ಬಿ ವಲಸೆಯೇತರ ವೀಸಾ ಆಗಿದ್ದು, ಅಮೆರಿಕದ ಕಂಪನಿಗಳು ವಿದೇಶಿ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಅವಕಾಶ ಕಲ್ಪಿಸುತ್ತದೆ. ತಾಂತ್ರಿಕ ನೈಪುಣ್ಯಕ್ಕೆ ಅನುಗುಣವಾಗಿ ನೇಮಕಾತಿ ನಡೆಯುತ್ತದೆ. ಈ ವೀಸಾ ಅಡಿಯಲ್ಲಿ ಪ್ರತಿವರ್ಷ ಭಾರತ ಹಾಗೂ ಚೀನಾದಿಂದ ಸಾವಿರಾರು ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತವೆ. ಏಪ್ರಿಲ್ 1ರಿಂದ ಆನ್‌ಲೈನ್‌ನಲ್ಲಿ ನೋಂದಣಿ ಆರಂಭವಾಗಲಿದೆ.