ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಉತ್ತಮ ಸಂಭಾಷಣೆ ನಡೆಸಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಮಂಗಳವಾರ ಉಭಯ ನಾಯಕರು ನಡೆಸಿದ ಸಂಭಾಷಣೆಯನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದ್ದಾರೆ.

ತೆರಿಗೆ ಕಡಿತದ ಕುರಿತು ದುಂಡುಮೇಜಿನ ಸಭೆಯನ್ನು ಉದ್ದೇಶಿಸಿ ಮಾತನಾಡಲು ಲಾಸ್ ವೇಗಾಸ್ಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ‘ಭಾರತದ ನನ್ನ ಸ್ನೇಹಿತನ ಜೊತೆ ಸುದೀರ್ಘ ಚರ್ಚೆ ನಡೆಸಿದ್ದೇನೆ. ಅವರು ಅದ್ಭುತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.

ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸಲು ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಪರಸ್ಪರ ದೃಷ್ಟಿಕೋನಗಳನ್ನು ಹಂಚಿಕೊಳ್ಳಲು ಟ್ರಂಪ್ ಅವರು ಮಂಗಳವಾರ ಮೋದಿಯವರಿಗೆ ದೂರವಾಣಿ ಕರೆ ಮಾಡಿದ್ದರು. ಸಂಭಾಷಣೆ ವೇಳೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವ ಬಗ್ಗೆ ಅನಿಸಿಕೆ ಹಂಚಿಕೊಂಡಿದ್ದಾರೆ.

ಅಧ್ಯಕ್ಷ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸುಮಾರು 40 ನಿಮಿಷಗಳ ಸಂಭಾಷಣೆ ನಡೆಸಿದ್ದಾರೆ ಎಂದು ಭಾರತದಲ್ಲಿನ ಅಮೆರಿಕದ ರಾಯಭಾರಿ ಸೆರ್ಗೆಯ್ ಗೋರ್ ತಿಳಿಸಿದ್ದಾರೆ. ಈ ವೇಳೆ ‘ನಾವೆಲ್ಲರೂ ನಿಮ್ಮನ್ನು ಪ್ರೀತಿಸುತ್ತೇವೆ’ ಎಂದು ಟ್ರಂಪ್ ಅವರಿಗೆ ಮೋದಿ ತಿಳಿಸಿದ್ದಾರೆ.

ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧ ಪ್ರಾರಂಭವಾದ ನಂತರ ಉಭಯ ನಾಯಕರ ನಡುವೆ ನಡೆದ ಎರಡನೇ ದೂರವಾಣಿ ಸಂಭಾಷಣೆ ಇದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.