ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹನಿಯೆ ಹತ್ಯೆಯ ನಂತರ ಹಮಾಸ್‌ಗೆ ಹೊಸ ನಾಯಕ ಯಾಹ್ಯಾ ಸಿನ್ವಾರ್

Published : 7 ಆಗಸ್ಟ್ 2024, 3:28 IST
Last Updated : 7 ಆಗಸ್ಟ್ 2024, 4:13 IST
ಫಾಲೋ ಮಾಡಿ
Comments

ಕೈರೊ: ಹಮಾಸ್ ನಾಯಕರಾಗಿದ್ದ ಇಸ್ಮಾಯಿಲ್‌ ಹನಿಯೆ ಹತ್ಯೆಯ ನಂತರ ಹಮಾಸ್ ಸಂಘಟನೆಯ ನೂತನ ಮುಖ್ಯಸ್ಥರನ್ನಾಗಿ ಯಾಹ್ಯಾ ಸಿನ್ವಾರ್ ಅವರನ್ನು ನೇಮಿಸಲಾಗಿದೆ ಎಂದು ರಾಯಿಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹಮಾಸ್, ಇಸ್ರೇಲ್ ಮೇಲೆ ದಾಳಿ ಮಾಡುವಲ್ಲಿ ಮುಖ್ಯ ಯೋಜನೆ ರೂಪಿಸಿದವರಲ್ಲಿ ಯಾಹ್ಯಾ ಸಿನ್ವಾರ್ ಒಬ್ಬರು.

1962 ರಲ್ಲಿ ಗಾಜಾದಲ್ಲಿ ಜನಿಸಿರುವ ಸಿನ್ವಾರ್, 1988 ರಲ್ಲಿ ಹಮಾಸ್ ಸಂಘಟನೆ ಸೇರಿದ್ದರು. ಇಸ್ರೇಲ್ ವಿರುದ್ಧ ಹಮಾಸ್ ಯೋಜನೆಗಳನ್ನು ರೂಪಿಸುವಲ್ಲಿ ಮುಂಚೂಣಿಯಲ್ಲಿದ್ದರು.

ಹಮಾಸ್ ಬಂಡುಕೋರರ ನಾಯಕ ಇಸ್ಮಾಯಿಲ್ ಹನಿಯೆ ಅವರಿದ್ದ ಟೆಹರಾನ್ ನಿವಾಸದ ಮೇಲೆ ಇಸ್ರೇಲ್ ಇತ್ತೀಚೆಗೆ (ಜುಲೈ 30) ದಾಳಿ ನಡೆಸಿತ್ತು. ಘಟನೆಯಲ್ಲಿ ಇಸ್ಮಾಯಿಲ್ ಹನಿಯೆ ಮತ್ತು ಅವರ ಅಂಗರಕ್ಷಕ ಮೃತಪಟ್ಟಿದ್ದರು.

ಈ ಘಟನೆಯ ನಂತರ ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದಿದೆ.

ಇನ್ನೊಂದೆಡೆ ಹನಿಯೆ ಭದ್ರತೆಯಲ್ಲಿ ಉಂಟಾದ ಲೋಪಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆಯ ಹಿರಿಯ ಅಧಿಕಾರಿಗಳು, ಸೇನಾಧಿಕಾರಿಗಳು ಹಾಗೂ ರಾಜಧಾನಿಯಲ್ಲಿರುವ ಸೇನೆಯ ಅತಿಥಿ ಗೃಹದಲ್ಲಿ ಕೆಲಸ ಮಾಡುವ ಸಿಬ್ಬಂದಿ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಮಂದಿಯನ್ನು ಇರಾನ್‌ನಲ್ಲಿ ಬಂಧಿಸಲಾಗಿದೆ.

ಹನಿಯೆ ಹತ್ಯೆಗೆ ಇಸ್ರೇಲ್‌ ಕಾರಣ ಎಂದು ಇರಾನ್‌ ಹಾಗೂ ಹಮಾಸ್‌ ಕಿಡಿಕಾರಿವೆ. ಪ್ಯಾಲೆಸ್ಟೀನ್‌ನ ಬಂಡುಕೋರ ಸಂಘಟನೆಯ ರಾಜಕೀಯ ಘಟಕದ ಮುಖ್ಯಸ್ಥ ಹನಿಯೆ ಸಾವಿಗೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯೇ ಕಾರಣ ಎಂದು ಹಮಾಸ್‌ ಆರೋಪಿಸಿದೆ. 'ದಾಳಿಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ' ಎಂದು ಇರಾನ್‌ನ ಪ್ಯಾರಾ ಮಿಲಿಟರಿ ರೆವಲ್ಯೂಷನರಿ ಗಾರ್ಡ್‌ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT