ಗಾಜಾ ಪಟ್ಟಿ: ಒತ್ತೆಯಾಳುಗಳ ಪೈಕಿ ಸುಮಾರು 50 ಮಂದಿ ಇಸ್ರೇಲ್ ನಡೆಸಿದ ವಾಯು ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಹಮಾಸ್ ಬಂಡುಕೋರರು ಹೇಳಿದ್ದಾರೆ.
ಅಕ್ಟೋಬರ್ 7ರಿಂದ ಇಸ್ರೇಲ್ ಗಾಜಾ ಪಟ್ಟಿಯ ಮೇಲೆ ವಾಯು ದಾಳಿ ನಡೆಸುತ್ತಿದೆ. ಹಮಾಸ್ ಬಂಡುಕೋರರು ಇಸ್ರೇಲ್ ಹಾಗೂ ವಿವಿಧ ದೇಶಗಳ 200ಕ್ಕೂ ಹೆಚ್ಚು ಜನರನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದಾರೆ.
ಇಷ್ಟು ಮಂದಿ ಒತ್ತೆಯಾಳುಗಳು ಮೃತಪಟ್ಟಿದ್ದಾರೆ ಎಂಬ ವಿಚಾರವನ್ನು ಬಂಡುಕೋರರು ತಮ್ಮ ಟೆಲಿಗ್ರಾಮ್ ಚಾನೆಲ್ ಮೂಲಕ ತಿಳಿಸಿದ್ದಾರೆ. ಆದರೆ ಅವರ ಹೇಳಿಕೆಯನ್ನು ಸ್ವತಂತ್ರವಾಗಿ ಪರಿಶೀಲಿಸಲು ಎಎಫ್‌ಪಿ ಸುದ್ದಿಸಂಸ್ಥೆಗೆ ತಕ್ಷಣಕ್ಕೆ ಸಾಧ್ಯವಾಗಿಲ್ಲ.
ಇಸ್ರೇಲ್ ಮೇಲೆ ನಡೆಸಿದ ದಾಳಿಯ ಸಂದರ್ಭದಲ್ಲಿ ಬಂಡುಕೋರರು 1,400 ಜನರನ್ನು ಹತ್ಯೆ ಮಾಡಿದ್ದಾರೆ, 224 ಮಂದಿಯನ್ನು ಒತ್ತೆಯಾಳುಗಳನ್ನಾಗಿ ಒಯ್ದಿದ್ದಾರೆ ಎಂದು ಇಸ್ರೇಲ್ ಸೇನೆ ಹೇಳಿದೆ. ಒತ್ತೆಯಾಳುಗಳ ಪೈಕಿ ನಾಲ್ಕು ಮಂದಿಯನ್ನು ಇದುವರೆಗೆ ಬಿಡುಗಡೆ ಮಾಡಲಾಗಿದೆ.
ಇಸ್ರೇಲ್ ನಡೆಸಿದ ಪ್ರತಿದಾಳಿಗೆ ಏಳು ಸಾವಿರ ಜನರು ಮೃತಪಟ್ಟಿದ್ದಾರೆ ಎಂದು ಹಮಾಸ್ ಆರೋಗ್ಯ ಸಚಿವಾಲಯ ತಿಳಿಸಿದೆ. ಗಡಿಯುದ್ದಕ್ಕೂ ಇಸ್ರೇಲ್‌ನ ಸೇನಾ ಪಡೆ ಜಮಾಯಿಸಿದರೆ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.