ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೇಲ್‌ ಮೇಲಿನ ಇರಾನ್‌ ದಾಳಿಯನ್ನು ಸಮರ್ಥಿಸಿದ ಹಮಾಸ್‌

Published 14 ಏಪ್ರಿಲ್ 2024, 12:59 IST
Last Updated 14 ಏಪ್ರಿಲ್ 2024, 12:59 IST
ಅಕ್ಷರ ಗಾತ್ರ

ಗಾಜಾ: ಇಸ್ರೇಲ್‌ ಮೇಲೆ ಇರಾನ್‌ ಆರಂಭಿಸಿರುವ ದಾಳಿಯನ್ನು ‘ಸ್ವಾಭಾವಿಕ ಹಕ್ಕು’ ಎಂದು ಪ್ಯಾಲೆಸ್ಟೀನಿಯನ್ ಇಸ್ಲಾಮಿಸ್ಟ್‌ ಗುಂಪು ಹಮಾಸ್‌ ಸಮರ್ಥಿಸಿಕೊಂಡಿದೆ. ಗಾಜಾದಲ್ಲಿ ಆರು ತಿಂಗಳಿಗೂ ಹೆಚ್ಚು ಕಾಲದಿಂದ ಹಮಾಸ್‌ ಗುಂಪು ಇಸ್ರೇಲ್‌ನೊಂದಿಗೆ ಯುದ್ಧದಲ್ಲಿ ತೊಡಗಿದೆ.

ಸಿರಿಯಾದ ರಾಜಧಾನಿ ಡಮಾಸ್ಕಸ್‌ನಲ್ಲಿನ ಇರಾನ್‌ ರಾಯಭಾರ ಕಚೇರಿ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ರೆವಲ್ಯೂಷನರಿ ಗಾರ್ಡ್‌ನ ಇಬ್ಬರು ಬ್ರಿಗೇಡಿಯರ್‌ ಜನರಲ್‌ ಸೇರಿ ಹಲವು ಸೇನಾಧಿಕಾರಿಗಳು ಹತರಾಗಿದ್ದರು. ಇದಕ್ಕೆ ಪ್ರತಿಯಾಗಿ ಇಸ್ಲಾಮಿಕ್‌ ರಿಪಬ್ಲಿಕ್‌ ಆಫ್‌ ಇರಾನ್‌ ನಡೆಸಿದ ಸೇನಾ ಕಾರ್ಯಾಚರಣೆಯನ್ನು ನಾವು ಸ್ವಾಭಾವಿಕ ಹಕ್ಕು ಎಂದೇ ಪರಿಗಣಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಏಪ್ರಿಲ್‌ 1ರಂದು ಡಮಾಸ್ಕಸ್‌ನಲ್ಲಿನ ಇರಾನ್‌ ರಾಯಭಾರ ಕಚೇರಿ ಮೇಲೆ ಶಂಕಿತ ಇಸ್ರೇಲ್‌ ವೈಮಾನಿಕ ದಾಳಿಯ ಬಳಿಕ ಇರಾನ್‌ ಪ್ರತಿಕಾರದ ಮಾತುಗಳನ್ನಾಡಿತ್ತು. ಇದರ ಬೆನ್ನಲ್ಲೇ ಇರಾನ್‌ ಕಡೆಯಿಂದ ಶನಿವಾರ ತಡರಾತ್ರಿ ದಾಳಿಗಳು ನಡೆದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT