ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದಲ್ಲಿ ಪಿಎಚ್‌ಡಿ ವಿದ್ಯಾರ್ಥಿ ಹತ್ಯೆ

Published 3 ಮಾರ್ಚ್ 2024, 6:42 IST
Last Updated 3 ಮಾರ್ಚ್ 2024, 6:42 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ಭರತನಾಟ್ಯ, ಕೂಚಿಪುಡಿ ಕಲಾವಿದ ಹಾಗೂ ಪಿಎಚ್‌ಡಿ ವಿದ್ಯಾರ್ಥಿ ಅಮರನಾಥ್​ ಘೋಷ್‌ನನ್ನು ಅಮೆರಿಕದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಈ ಬಗ್ಗೆ ನಟಿ ದೇವೊಲೀನಾ ಭಟ್ಟಾಚಾರ್ಜಿ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನನ್ನ ಸ್ನೇಹಿತ ಅಮರನಾಥ್​ ಘೋಷ್‌ ವಾಕಿಂಗ್‌ ಮಾಡುವಾಗ ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಅವರ ಮೃತದೇಹವನ್ನು ಭಾರತಕ್ಕೆ ತರಬೇಕು ಎಂದು ದೇವೊಲೀನಾ ಪ್ರಧಾನಿ ಮತ್ತು ವಿದೇಶಾಂಗ ಸಚಿವರಲ್ಲಿ ಮನವಿ ಮಾಡಿದ್ದಾರೆ. 

ಅಮರ್​ನಾಥ್​ ಚಿಕ್ಕವರಿರುವಾಗಲೇ ಅವರ ತಂದೆ ತೀರಿಕೊಂಡಿದ್ದರು. ಮೂರು ವರ್ಷಗಳ ಹಿಂದೆ ಅಮರನಾಥ್​ ತಾಯಿಯೂ ನಿಧನರಾಗಿದ್ದಾರೆ. ಕೋಲ್ಕತ್ತದವರಾದ ಅಮರನಾಥ್ ಅಮೆರಿಕದಲ್ಲಿ ಪಿಎಚ್‌ಡಿ ಮಾಡುತ್ತಿದ್ದರು​ ಎಂದು ದೇವೊಲೀನಾ ಬರೆದುಕೊಂಡಿದ್ದಾರೆ.

ಈ ಬಗ್ಗೆ ಭಾರತೀಯ ರಾಯಭಾರಿ ಕಚೇರಿ ಅಥವಾ ಪ್ರಧಾನಿ ಕಚೇರಿಯಿಂದ ಯಾವುದೇ ಹೇಳಿಕೆಗಳು ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT